ಸಾಂದರ್ಭಿಕ ಚಿತ್ರ 
ದೇಶ

ಪುಣೆ: ಕೋಚಿಂಗ್ ಸೆಂಟರ್‌ನಲ್ಲಿ ಕ್ಲಾಸ್​ಮೇಟ್​ಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ; ಬಾಲಕ ಸಾವು!

10ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ಹುಡುಗರ ನಡುವಿನ ಹಿಂದಿನ ಜಗಳದ ಪರಿಣಾಮವಾಗಿ ಈ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.

ಪುಣೆ: ಪುಣೆ ಜಿಲ್ಲೆಯ ಕೋಚಿಂಗ್ ಸೆಂಟರ್‌ನಲ್ಲಿ ಸೋಮವಾರ ತರಗತಿಯೊಳಗೆ ಕ್ಲಾಸ್​ಮೇಟ್ ಒಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದರಿಂದ 16 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

10ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ಹುಡುಗರ ನಡುವಿನ ಹಿಂದಿನ ಜಗಳದ ಪರಿಣಾಮವಾಗಿ ಈ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾಜಗುರುನಗರದ ಖಾಸಗಿ ಕೋಚಿಂಗ್ ಸೆಂಟರ್‌ನಲ್ಲಿ ಈ ಘಟನೆ ನಡೆದಿದೆ.

"ಸೋಮವಾರ ಬೆಳಗ್ಗೆ ಕೋಚಿಂಗ್ ಸೆಂಟರ್‌ನಲ್ಲಿ ಚಾಕು ಹಿಡಿದುಕೊಂಡು ಬಂದ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯ ಮೇಲೆ ಇದ್ದಕ್ಕಿದ್ದಂತೆ ಹಲ್ಲೆ ನಡೆಸಿದ್ದಾನೆ. ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆತ ಸಾವನ್ನಪ್ಪಿದ್ದಾನೆ. ಆರೋಪಿ ಬಾಲಕನನ್ನು ಬಂಧಿಸುವ ಪ್ರಕ್ರಿಯೆ ನಡೆಯುತ್ತಿದೆ" ಎಂದು ಖೇಡ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಹುಡುಗರ ನಡುವೆ ಏನೋ ಜಗಳವಿತ್ತು ಎಂದು ಅವರು ಹೇಳಿದ್ದಾರೆ.

"ದಾಳಿಯ ಹಿಂದಿನ ನಿಖರವಾದ ಕಾರಣದ ಬಗ್ಗೆ ನಾವು ತನಿಖೆ ಮಾಡುತ್ತಿದ್ದೇವೆ" ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಮೇಲೆ ಹರಿದ ಟ್ರಕ್; 23 ಕುರಿ, 2 ಮೇಕೆ ಸಾವು, ಭೀಕರ ವಿಡಿಯೋ ಸಿಸಿಟಿವಿಯಲ್ಲಿ ಸೆರೆ!

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!