ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯಲ್ಲಿ ಕಡಿಮೆ ಗೋಚರತೆ; 120ಕ್ಕೂ ಹೆಚ್ಚು ವಿಮಾನ ರದ್ದು

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ವಕ್ತಾರರ ಪ್ರಕಾರ, ವಿಮಾನ ನಿಲ್ದಾಣದಲ್ಲಿ ಒಟ್ಟು 49 ನಿರ್ಗಮನ ಮತ್ತು 77 ಆಗಮನ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಕಡಿಮೆ ಗೋಚರತೆ ವಿಮಾನ ಕಾರ್ಯಾಚರಣೆಯ ಮೇಲೆ ತೀವ್ರ ಪರಿಣಾಮ ಬೀರಿದ್ದು, ಹಲವು ವಿಮಾನಗಳ ರದ್ದತಿಗೆ ಕಾರಣವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ವಕ್ತಾರರ ಪ್ರಕಾರ, ವಿಮಾನ ನಿಲ್ದಾಣದಲ್ಲಿ ಒಟ್ಟು 49 ನಿರ್ಗಮನ ಮತ್ತು 77 ಆಗಮನ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಅಡಚಣೆಗಳನ್ನು ಉಲ್ಲೇಖಿಸಿ, ಇಂಡಿಗೋ ಏರ್ಲೈನ್ಸ್ ತನ್ನ ನೆಟ್‌ವರ್ಕ್‌ನಾದ್ಯಂತ 110 ವಿಮಾನಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ಕಡಿಮೆ ಗೋಚರತೆಯಿಂದಾಗಿ, ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಉತ್ತರ ಭಾರತದಲ್ಲಿ ಚಳಿಗಾಲದಲ್ಲಿ ಬೆಳಗಿನ ವೇಳೆ ಆಗಾಗ್ಗೆ ದಟ್ಟವಾದ ಮಂಜು ಕವಿದಿರುತ್ತದೆ. ಇದು ವಿಮಾನಗಳ ಚಲನೆಯನ್ನು ನಿಧಾನಗೊಳಿಸುತ್ತದೆ. "ನಮ್ಮ ತಂಡ ಹವಾಮಾನವನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ ಮತ್ತು ಪ್ರಯಾಣಿಕರಿಗೆ ಅನಾನುಕೂಲತೆಯನ್ನು ಕಡಿಮೆ ಮಾಡಲು ಯತ್ನಿಸುತ್ತಿವೆ" ಎಂದು ಇಂಡಿಗೋ ತಿಳಿಸಿದೆ.

ಚಳಿಗಾಲದಲ್ಲಿ ಹವಾಮಾನ ಸಂಬಂಧಿತ ಅಡೆತಡೆಗಳು ಮುಂದುವರಿಯುವ ನಿರೀಕ್ಷೆಯಿರುವುದರಿಂದ, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಮೊದಲು ತಮ್ಮ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಿ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ