ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಮೊದಲ ದಿನವೇ ಭಾರತ ಸೋತಿತ್ತು ಎಂಬ ಹೇಳಿಕೆ ವಿವಾದವನ್ನು ಹುಟ್ಟು ಹಾಕಿದ್ದು, ವಿವಾದ ಬೆನ್ನಲ್ಲೇ ತಮ್ಮ ಹೇಳಿಕೆಯನ್ನು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಆದ್ದರಿಂದ ನಾನು ಯಾವುದೇ ಕ್ಷಮೆಯಾಚಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಈ ಹಿಂದೆ ಹೇಳಿಕೆ ನೀಡಿದ್ದ ಚವಾಣ್ ಅವರು, ಆಪರೇಷನ್ ಸಿಂಧೂರ್‌ನ ಮೊದಲ ದಿನ ನಾವು ಸಂಪೂರ್ಣವಾಗಿ ಸೋತಿದ್ದೇವೆ. 7 ರಂದು ನಡೆದ ಅರ್ಧ ಗಂಟೆಯ ವೈಮಾನಿಕ ಕಾರ್ಯಾಚರಣೆಯಲ್ಲಿ ಜನರು ಒಪ್ಪಬಹುದು, ಒಪ್ಪದೇ ಇರಬಹುದು ನಾವು ಸಂಪೂರ್ಣವಾಗಿ ಸೋತಿದ್ದೇವೆ. ಭಾರತೀಯ ವಿಮಾನಗಳನ್ನು ಹೊಡೆದುರುಳಿಸಲಾಯಿತು. ಒಂದೇ ಒಂದು ವಿಮಾನವೂ ಹಾರಲಿಲ್ಲ. ಗ್ವಾಲಿಯರ್, ಬಟಿಂಡಾ ಅಥವಾ ಸಿರ್ಸಾದಿಂದ ಯಾವುದೇ ವಿಮಾನ ಹೊರಟಿದ್ದರೆ, ಪಾಕಿಸ್ತಾನವು ಹೊಡೆದುರುಳಿಸುವ ಹೆಚ್ಚಿನ ಸಂಭವನೀಯತೆ ಇತ್ತು ಅದಕ್ಕಾಗಿಯೇ ವಾಯುಪಡೆಯನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಯಿತು ಎಂದು ಹೇಳಿದ್ದರು.
ಆಪರೇಷನ್ ಸಿಂಧೂರ್ ಸಮಯದಲ್ಲಿ ನಾವು ನೋಡಿದ್ದೇವೆ ಮಿಲಿಟರಿಯ ಒಂದು ಕಿಲೋಮೀಟರ್ ಚಲನೆಯೂ ಇರಲಿಲ್ಲ. ಎರಡು ಅಥವಾ ಮೂರು ದಿನಗಳಲ್ಲಿ ಏನೇ ನಡೆದರೂ ಅದು ಕೇವಲ ವೈಮಾನಿಕ ಯುದ್ಧ ಮತ್ತು ಕ್ಷಿಪಣಿ ಯುದ್ಧವಾಗಿತ್ತು. ಭವಿಷ್ಯದಲ್ಲಿಯೂ ಸಹ ಯುದ್ಧಗಳು ಅದೇ ರೀತಿಯಲ್ಲಿ ನಡೆಯುತ್ತವೆ. ಈ ಪರಿಸ್ಥಿತಿಯಲ್ಲಿ ನಾವು ನಿಜವಾಗಿಯೂ 12 ಲಕ್ಷ ಸೈನಿಕರ ಸೈನ್ಯವನ್ನು ನಿರ್ವಹಿಸುವ ಅಗತ್ಯವಿದೆಯೇ?ಅಥವಾ ಅವರಿಂದ ಬೇರೆ ಏನನ್ನಾದರೂ ಕೆಲಸ ಮಾಡಿಸಬಹುದೇ ಎಂದು ತಿಳಿಸಿದ್ದರು.