ಪೋಷಕರನ್ನು ಕೊಂದ ಮಗ 
ದೇಶ

ಅಂತರ್ಧಮೀಯ ವಿವಾಹಕ್ಕೆ ಪೋಷಕರ ವಿರೋಧ: ಹೆತ್ತ ತಂದೆ-ತಾಯಿಯ ಹತ್ಯೆ; ಗರಗಸದಿಂದ ದೇಹಗಳನ್ನು ಕತ್ತರಿಸಿ, ನದಿಗೆ ಎಸೆದ ಮಗ!

ಅಂಬೇಶ್‌ ಮುಸ್ಲಿಂ ಸಮುದಾಯದ ಯುವತಿಯನ್ನು ವಿವಾಹವಾಗಿದ್ದ. ಇದೇ ವಿಚಾರವಾಗಿ ಈತನಿಗೆ ಪೋಷಕರು ಜೊತೆ ಜಗಳವಾಗಿತ್ತು. ಸೊಸೆಯನ್ನು ಮನೆಗೆ ಸೇರಿಸಿಕೊಳ್ಳಲು ಪೋಷಕರು ನಿರಾಕರಿಸಿದ್ದರು.

ಲಕ್ನೋ: ವ್ಯಕ್ತಿಯೊಬ್ಬ ಹೆತ್ತ ತಂದೆ-ತಾಯಿಯನ್ನೇ ಹೊಡೆದು ಕೊಂದು, ಗರಗಸದಿಂದ ದೇಹಗಳನ್ನು ಕತ್ತರಿಸಿ ನದಿಗೆ ಎಸೆದು ರಾಕ್ಷಸಿ ಕೃತ್ಯ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಜೌನ್‌ಪುರದ ನಿವಾಸಿ, ಬಿ. ಟೆಕ್ ಪದವೀಧರ ಅಂಬೇಶ್‌ ಕೊಲೆ ಆರೋಪಿ. ತನ್ನ ತಂದೆ-ತಾಯಿ ಶ್ಯಾಮ್‌ ಬಹದ್ದೂರ್‌ (62), ಬಬಿತಾ (60) ಅವರನ್ನು ಕೊಲೆ ಮಾಡಿ, ಅವರ ದೇಹಗಳನ್ನು ಗರಗಸದಿಂದ ಕತ್ತರಿಸಿ ನದಿಗೆ ಎಸೆದಿದ್ದ.

ಡಬಲ್‌ ಮರ್ಡರ್‌ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಂದೆಯ ಹಠಮಾರಿತನ ಹಾಗೂ ಮಗನ ಕೋಪವೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಅಂಬೇಶ್‌ ಮುಸ್ಲಿಂ ಸಮುದಾಯದ ಯುವತಿಯನ್ನು ವಿವಾಹವಾಗಿದ್ದ. ಇದೇ ವಿಚಾರವಾಗಿ ಈತನಿಗೆ ಪೋಷಕರು ಜೊತೆ ಜಗಳವಾಗಿತ್ತು. ಸೊಸೆಯನ್ನು ಮನೆಗೆ ಸೇರಿಸಿಕೊಳ್ಳಲು ಪೋಷಕರು ನಿರಾಕರಿಸಿದ್ದರು.

ಇದರಿಂದ ಅಂಬೇಶ್ ಮತ್ತು ಆತನ ಪತ್ನಿ ಅಂತಿಮವಾಗಿ ಬೇರೆಯಾಗಲು ನಿರ್ಧರಿಸಿದರು. ಜೀವನಾಂಶ ಪಾವತಿಸಲು ಆತನಿಗೆ ಹಣದ ಅಗತ್ಯವಿತ್ತು. ತನ್ನ ತಂದೆ ಬಳಿ ಹಣ ಕೇಳಿದ್ದ. ಆದರೆ, ಹಣ ಕೊಡಲು ನಿರಾಕರಿಸಿದ್ದರು. ಈ ವಿಚಾರವಾಗಿ ಪೋಷಕರ ಜೊತೆಗೆ ಜಗಳ ನಡೆದಿದ್ದು, ಅಂತಿಮವಾಗಿ ಹೆತ್ತ ತಂದೆ ತಾಯಿಯನ್ನೇ ಕೊಲೆ ಮಾಡಿದ್ದಾನೆ.

ಡಿ.13 ರಂದು ಅಂಬೇಶ್‌ ಸಹೋದರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಂದೆ-ತಾಯಿ ಮತ್ತು ಸಹೋದರ ಕಾಣೆಯಾಗಿದ್ದಾರೆಂದು ದೂರಿದ್ದರು. ಅಪ್ಪ-ಅಮ್ಮ ನನ್ನೊಟ್ಟಿಗೆ ಜಗಳವಾಡಿಕೊಂಡು ಮನೆಬಿಟ್ಟು ಹೋಗಿದ್ದಾರೆ. ಅವರನ್ನು ಹುಡುಕುತ್ತಿದ್ದೇನೆ ಎಂದು ಅಂಬೇಶ್‌ ನನಗೆ ಕರೆ ಮಾಡಿ ತಿಳಿಸಿದ್ದ. ಫೋನ್‌ ಮಾಡಿದಾಗ ಸ್ವಿಚ್ಡ್‌ ಆಫ್‌ ಆಗಿದೆ ಎಂದಿದ್ದಾರೆ. ಈ ಎಲ್ಲಾ ವಿಷಯಗಳನ್ನು ಸಹೋದರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅನುಮಾನಗೊಂಡು ಪೊಲೀಸರು ಅಂಬೇಶ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ಕೊಲೆ ವಿಚಾರ ಬಹಿರಂಗವಾಗಿದೆ.

ನಿವೃತ್ತ ರೈಲ್ವೆ ಉದ್ಯೋಗಿ ಶ್ಯಾಮ್ ಬಹದ್ದೂರ್ ಮತ್ತು ಅವರ ಪತ್ನಿ ಬಬಿತಾಗೆ ಮೂವರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ ಇದ್ದರು. ಮಗ ಅಂಬೇಶ್ ಐದು ವರ್ಷಗಳ ಹಿಂದೆ ಮುಸ್ಲಿಂ ಮಹಿಳೆಯನ್ನು ವಿವಾಹವಾಗಿದ್ದ. ಆದರೆ, ಪೋಷಕರು ಈ ವಿವಾಹವನ್ನು ಒಪ್ಪಲಿಲ್ಲ. ತಮ್ಮ ಮುಸ್ಲಿಂ ಸೊಸೆಯನ್ನು ತಮ್ಮ ಮನೆಗೆ ಬಿಡುವುದಿಲ್ಲ ಎಂದು ಹೇಳಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಕೊನೆಗೆ ಅಂಬೇಶ್‌ ತನ್ನ ಪತ್ನಿಯಿಂದ ದೂರಾಗಲು ನಿರ್ಧರಿಸಿದರು. 5 ಲಕ್ಷ ರೂ. ಜೀವನಾಂಶವನ್ನು ಆತನ ಪತ್ನಿ ಕೇಳಿದ್ದಳು. ಹಣದ ವಿಚಾರಕ್ಕೆ ತಂದೆ-ತಾಯಿ ಜೊತೆ ಜಗಳ ಮಾಡಿಕೊಂಡು ಅಂಬೇಶ್‌ ಹತ್ಯೆ ಮಾಡಿದ್ದಾನೆ.

ತನ್ನ ಹೆತ್ತವರನ್ನು ಕೊಂದ ನಂತರ, ಅಂಬೇಶ್ ಸಾಕ್ಷ್ಯಗಳನ್ನು ನಾಶಮಾಡಲು ಪ್ರಾರಂಭಿಸಿದನು. ಶವಗಳನ್ನು ವಿಲೇವಾರಿ ಮಾಡಲು ದೊಡ್ಡ ಚೀಲವನ್ನು ಹುಡುಕಲು ಪ್ರಾರಂಭಿಸಿದನು, ಆದರೆ ಆತನಿಗೆ ಚೀಲ ಸಿಗಲಿಲ್ಲ. ಗ್ಯಾರೇಜ್‌ನಲ್ಲಿ ಕೆಲವು ಸಣ್ಣ ಚೀಲಗಳು ಇದ್ದವು, ಹೀಗಾಗಿ ಆತ ಶವಗಳನ್ನು ತುಂಡುಗಳಾಗಿ ಕತ್ತರಿಸಬೇಕಾಯಿತು. ಗ್ಯಾರೇಜ್‌ನಲ್ಲಿದ್ದ ಗರಗಸ ತೆಗೆದುಕೊಂಡು ಪೋಷಕರ ದೇಹವನ್ನು ಕತ್ತರಿಸಿ ನದಿಗೆ ಎಸೆದಿದ್ದ.

ನಂತರ ಪೊಲೀಸರು ಶವಗಳನ್ನು ಹುಡುಕಲು ಪ್ರಾರಂಭಿಸಿದರು. ಅವರು ಶ್ಯಾಮ್ ಬಹದ್ದೂರ್ ಅವರ ದೇಹದ ಒಂದು ಭಾಗ ಸಿಕ್ಕಿದ್ದು, ಶವಗಳನ್ನು ಕತ್ತರಿಸಲು ಬಳಸಿದ ಗರಗಸ ಮತ್ತು ಕೊಲೆಗೆ ಬಳಸಿದ ರುಬ್ಬುವ ಕಲ್ಲನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಕಿ' ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ಲೋಕಸಭೆಯಲ್ಲಿ G Ram G ಮಸೂದೆ ಅಂಗೀಕಾರ; ಪ್ರತಿಪಕ್ಷಗಳಿಂದ ಪ್ರತಿ ಹರಿದು ಹಾಕಿ ಆಕ್ರೋಶ

'ದಯವಿಟ್ಟು ಕ್ರಿಕೆಟ್ ಪ್ರಿಯರಿಗೆ ಮೋಸ ಮಾಡಬೇಡಿ: ಬಿಸಿಸಿಐಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಸೂಚನೆ

ಭಾರತ vs ದಕ್ಷಿಣ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು; ಟೀಕೆಯ ಬಳಿಕ ಮಹತ್ವದ ಹೆಜ್ಜೆ ಇಡಲು ಸಜ್ಜಾದ ಬಿಸಿಸಿಐ!

VB-G RAM ಮಸೂದೆ: ಸಂಸತ್ತಿನ ಸಂಕೀರ್ಣದಲ್ಲಿ ವಿಪಕ್ಷಗಳ ಪ್ರತಿಭಟನಾ ಮೆರವಣಿಗೆ, ಬೀದಿಗಿಳಿದು ಹೋರಾಟ ನಡೆಸುವುದಾಗಿ ಪ್ರತಿಜ್ಞೆ

SCROLL FOR NEXT