ಹೈದರಾಬಾದ್: ವೈಎಸ್‌ಆರ್‌ಸಿಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ವಿರೋಧ ಪಕ್ಷದ ನಾಯಕ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಜನ್ಮದಿನ ಇಂದು ಆಗಿದ್ದು, ಅವರ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
ಆದರೆ ಈ ಬರ್ತ್ ಡೇ ಪಾರ್ಟಿಯಲ್ಲಿ ವೈಎಸ್‌ಆರ್‌ಸಿಪಿ ನಾಯಕರು ಮತ್ತು ಕಾರ್ಯಕರ್ತರು ಕೇಕನ್ನು ಚೆಲ್ಲಾಪಿಲ್ಲಿಯಾಗಿ ಮನಸೋ ಇಚ್ಛೆ ಒಬ್ಬರ ಮೇಲೊಬ್ಬರು ಎರಚಿ, ಮುಖಕ್ಕೆ ಮೆತ್ತಿಕೊಂಡು ಅತಿರೇಕದಿಂದ ವರ್ತಿಸಿದ್ದು ಒಬ್ಬ ನಾಯಕನ ಹುಟ್ಟುಹಬ್ಬ ಪಾರ್ಟಿಯಲ್ಲಿ ಸಾಮಾನ್ಯ ತಿಳುವಳಿಯಿಲ್ಲದಂತೆ ನಡೆದುಕೊಂಡಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿದೆ.
ಪಕ್ಷಾತೀತವಾಗಿ ಶುಭಹಾರೈಕೆ
ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಮತ್ತು ಇತರರು ಜಗನ್ ಅವರಿಗೆ ಉತ್ತಮ ಆರೋಗ್ಯ ಮತ್ತು ಸಂತೋಷದ ಜೀವನ ಸಿಗಲಿ ಎಂದು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ.
ಬೆಂಬಲಿಗರು ಹೈದರಾಬಾದ್‌ನಲ್ಲಿ ರ್ಯಾಲಿಗಳು ಮತ್ತು ಆಂಧ್ರಪ್ರದೇಶದಾದ್ಯಂತ ಬೈಕ್ ಈವೆಂಟ್‌ಗಳನ್ನು ನಡೆಸಿದರು.