ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ ಜಿಲ್ಲೆಯ ಪುದುಶ್ಶೇರಿಯಲ್ಲಿ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಮಕ್ಕಳನ್ನು ಒಳಗೊಂಡ ಕ್ಯಾರೋಲ್ ಗುಂಪು ಭಾನುವಾರ ರಾತ್ರಿ ಭಕ್ತರ ಮನೆಗಳಿಗೆ ಭೇಟಿ ನೀಡುತ್ತಿದ್ದಾಗ ಈ ದಾಳಿ ನಡೆದಿದೆ.
ಬಂಧಿತ ಆರೋಪಿಯನ್ನು ಅಶ್ವಿನ್ ರಾಜ್ ಎಂದು ಗುರುತಿಸಲಾಗಿದೆ.
ಆರ್‌ಎಸ್‌ಎಸ್ ಪ್ರಬಲವಾಗಿದೆ ಎಂದು ಪರಿಗಣಿಸಲಾದ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಆರೋಪಿ, ಕ್ಯಾರೋಲ್ ಗುಂಪಿನ ಮೇಲೆ ದಾಳಿ ನಡೆಸಿ ಅವರ ಬ್ಯಾಂಡ್ ಸೆಟ್ ಮತ್ತು ಇತರ ವಸ್ತುಗಳನ್ನು ನಾಶಪಡಿಸಿದ್ದಾರೆ.
"ಅಶ್ವಿನ್ ರಾಜ್ ಈಗಾಗಲೇ ಕೇರಳ ಸಮಾಜ ವಿರೋಧಿ ಚಟುವಟಿಕೆ(ತಡೆಗಟ್ಟುವಿಕೆ) ಕಾಯ್ದೆಯಡಿ ಆರೋಪಿಯಾಗಿದ್ದಾರೆ. ಪ್ರಸ್ತುತ ಪ್ರಕರಣದಲ್ಲಿ, ಅವರ ವಿರುದ್ಧ ಬಿಎನ್‌ಎಸ್‌ನ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.