ಪ್ರಿಯಾಂಕಾ ಗಾಂಧಿ ವಾದ್ರಾ 
ದೇಶ

ಪ್ರಿಯಾಂಕಾ ಗಾಂಧಿಯನ್ನು 'ಪ್ರಧಾನಿ'ಯಾಗಿ ಮಾಡೇ ಮಾಡ್ತೀವಿ, ನೋಡ್ತಾ ಇರಿ! ಕಾಂಗ್ರೆಸ್ ಸಂಸದ

ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪ್ರಧಾನಿಯನ್ನಾಗಿ ಮಾಡಿದರೆ, ತನ್ನ ಅಜ್ಜಿ ಇಂದಿರಾ ಗಾಂಧಿಯಂತೆ ಹೇಗೆ ಸೇಡು ತೀರಿಸಿಕೊಳ್ಳುತ್ತಾರೆ ಅನ್ನೋದನ್ನ ನೋಡ್ತಾ ಇರಿ ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು 'ಪ್ರಧಾನಿ'ಯಾಗಿ ಮಾಡೇ ಮಾಡ್ತೀವಿ, ಇಂದಿರಾಗಾಂಧಿಯಂತೆ ಹೇಗೆ ಸೇಡು ತೀರಿಸಿಕೊಳ್ಳುತ್ತಾರೆ ಎಂಬುದನ್ನು ನೋಡ್ತಾ ಇರಿ ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಮಂಗಳವಾರ ಹೇಳಿದ್ದಾರೆ.

ANI ಸುದ್ದಿಸಂಸ್ಥೆ ಜೊತೆಗೆ ಮಾತನಾಡಿದ ಅವರು, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರ ಹೆಚ್ಚಳ ಕುರಿತು ಪ್ರಿಯಾಂಕಾ ಗಾಂಧಿ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪ್ರಧಾನಿಯನ್ನಾಗಿ ಮಾಡಿದರೆ, ತನ್ನ ಅಜ್ಜಿ ಇಂದಿರಾ ಗಾಂಧಿಯಂತೆ ಹೇಗೆ ಸೇಡು ತೀರಿಸಿಕೊಳ್ಳುತ್ತಾರೆ ಅನ್ನೋದನ್ನ ನೋಡ್ತಾ ಇರಿ ಎಂದರು.

ಆಕೆ ಇಂದಿರಾ ಗಾಂಧಿ ಮೊಮ್ಮಗಳು. ಅವರು ಪಾಕಿಸ್ತಾನಕ್ಕೆ ತುಂಬಾ ಹಾನಿಯನ್ನುಂಟುಮಾಡಿದ್ದಾರೆ. ಆ ಗಾಯಗಳು ಇನ್ನೂ ವಾಸಿಯಾಗಿಲ್ಲ. ಪ್ರಧಾನಿಯಾಗಿ ಮಾಡಿದರೆ ಆಕೆ ಹೇಗೆ ಪ್ರತೀಕಾರ ತೆಗೆದುಕೊಳ್ಳಲಿದ್ದಾರೆ ಎಂಬುದನ್ನು ನೋಡಿ, ನಿಮಗೆ ಆ ಎದೆಗಾರಿಕೆ ಇಲ್ಲ ಎಂದರು.

ಬಾಂಗ್ಲಾದೇಶದಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಹತ್ಯೆಯ ನಂತರ ಅಲ್ಪಸಂಖ್ಯಾತರ ಮೇಲೆ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಗಮನ ಹರಿಸಬೇಕೆಂದು ಕೇಂದ್ರವನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಇತ್ತೀಚಿಗೆ ಒತ್ತಾಯಿಸಿದ್ದರು. ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಕ್ರೂರ ಹತ್ಯೆಯನ್ನು ಖಂಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ

Operation Sindoorಗೆ ಪಾಕಿಸ್ತಾನ ತಿರುಗೇಟು; ಭಾರತದ 2 ವಾಯುನೆಲೆ ಧ್ವಂಸ ಅಂತೆ..! ಆದ್ರೆ ಅದು ಅಸ್ತಿತ್ವದಲ್ಲೇ ಇಲ್ಲ..!

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

SCROLL FOR NEXT