ಪ್ರಧಾನಿ ಭೇಟಿಯಾದ ನೀರಜ್ ಚೋಪ್ರಾ 
ದೇಶ

ಪ್ರಧಾನಿ ಭೇಟಿಯಾದ ನೀರಜ್ ಚೋಪ್ರಾ; ಕ್ರೀಡೆ ಬಗ್ಗೆ ಉತ್ತಮ ಚರ್ಚೆ ಎಂದ ಮೋದಿ

ಈ ವರ್ಷದ ಆರಂಭದಲ್ಲಿ ಮಾಜಿ ಟೆನಿಸ್ ಆಟಗಾರ್ತಿ ಮೋರ್ ಅವರನ್ನು ವಿವಾಹವಾದ ಚೋಪ್ರಾ, ಪ್ರಸ್ತುತ ಸ್ಪರ್ಧೆಯಿಂದ ವಿರಾಮ ತೆಗೆದುಕೊಂಡಿದ್ದಾರೆ.

ನವದೆಹಲಿ: ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮತ್ತು ಅವರ ಪತ್ನಿ ಹಿಮಾನಿ ಮೋರ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಈ ವರ್ಷದ ಆರಂಭದಲ್ಲಿ ಮಾಜಿ ಟೆನಿಸ್ ಆಟಗಾರ್ತಿ ಮೋರ್ ಅವರನ್ನು ವಿವಾಹವಾದ ಚೋಪ್ರಾ, ಪ್ರಸ್ತುತ ಸ್ಪರ್ಧೆಯಿಂದ ವಿರಾಮ ತೆಗೆದುಕೊಂಡಿದ್ದಾರೆ.

ನೀರಜ್ ಚೋಪ್ರಾ ವಿವಾಹ ಸಮಾರಂಭದಲ್ಲಿ ಕೆಲವೇ ಕೆಲವು ಹತ್ತಿರ ಸಂಬಂಧಿಗಳು ಮತ್ತು ಕುಟುಂಬ ಸದಸ್ಯರು ಹಾಜರಿದ್ದರು. ಚೋಪ್ರಾ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮದುವೆಯ ಫೋಟೋಗಳನ್ನು ಪೋಸ್ಟ್ ಮಾಡಿದಾಗ ಜನರು ಅವರ ವಿವಾಹದ ಬಗ್ಗೆ ತಿಳಿದುಕೊಂಡಿದ್ದರು.

"ಇಂದು ಬೆಳಗ್ಗೆ ಲೋಕ ಕಲ್ಯಾಣ್ ಮಾರ್ಗ್‌ದಲ್ಲಿರುವ ತಮ್ಮ ನಿವಾಸಕ್ಕೆ ನೀರಜ್ ಚೋಪ್ರಾ ಮತ್ತು ಅವರ ಪತ್ನಿ ಹಿಮಾನಿ ಮೋರ್ ಅವರು ಆಗಮಿಸಿದ್ದರು. ಈ ವೇಳೆ ಕ್ರೀಡೆ ಸೇರಿದಂತೆ ವಿವಿಧ ವಿಷಯಗಳ ಕುರಿತು ನಾವು ಉತ್ತಮ ಸಂವಾದ ನಡೆಸಿದೆವು!" ಎಂದು ಪ್ರಧಾನಿ ಮೋದಿ 'X' ನಲ್ಲಿ ಪೋಸ್ಟ್ ಮಾಡಿದ್ದಾರೆ.

2021ರಲ್ಲಿ ಟೋಕಿಯೊದಲ್ಲಿ ನಡೆದ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಅವರು ಇತಿಹಾಸ ಸೃಷ್ಟಿಸಿದ್ದರು. ಚಿನ್ನದ ಪದಕ ಗೆದ್ದ ಭಾರತದ ಮೊದಲ ಅಥ್ಲೆಟಿಕ್ಸ್ ಎಂಬ ಗೌರವಕ್ಕೆ ನೀರಜ್ ಚೋಪ್ರಾ ಪಾತ್ರರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರ ವ್ಯತ್ಯಯ!

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ತಿರಸ್ಕಾರ: 'ಸುಪ್ರೀಂ' ತೀರ್ಪು ಸ್ವಾಗತಿಸಿದ ಡಿಕೆ ಶಿವಕುಮಾರ್

ಮೂಲಭೂತವಾದಿಗಳ ಒತ್ತಡಕ್ಕೆ ಮಣಿದ ಪಾಕ್ ಸರ್ಕಾರ; ಹಿಂದೂ ಹೆಸರುಗಳ ಮರು ನಾಮಕರಣ ಮುಂದೂಡಿಕೆ!

SCROLL FOR NEXT