ಸಿಎಂ ಪಿಣರಾಯಿ ವಿಜಯನ್ 
ದೇಶ

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ: ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ನಂಟು; ಸಿಎಂ ಪಿಣರಾಯಿ ಗಂಭೀರ ಆರೋಪ

ಸೋನಿಯಾ ಹೆಚ್ಚಿನ ಭದ್ರತೆಯಿರುವ ನಾಯಕಿ. ಆರೋಪಿಗೆ ಹೇಗೆ ಅವರ ಭೇಟಿ ಸಾಧ್ಯವಾಯಿತು. ಸೋನಿಯಾ ಅವರು ಉನ್ನಿಕೃಷ್ಣನ್‌ ಪೊಟ್ಟಿ, ಗೋವರ್ಧನ್‌ರಿಂದ ಉಡುಗೊರೆ ಸ್ವೀಕರಿಸುತ್ತಿರುವ ಫೋಟೋವೊಂದನ್ನು ಸಿಎಂ ಹಂಚಿಕೊಂಡಿದ್ದಾರೆ.

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್‌ ಪೊಟ್ಟಿ ಮತ್ತು ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್‌ಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ನಂಟಿದೆ’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಪಿಣರಾಯಿ ಅವರು, ಕೇರಳದ ಮಾಜಿ ಸಿಎಂ ಕರುಣಾಕರನ್‌, ಹಿಮಂತ ಬಿಸ್ವಾ ಶರ್ಮಾ ಅವರಿಗೆ ಸೋನಿಯಾ ಗಾಂಧಿ ಅಪಾಯಿಂಟ್ಮೆಂಟ್‌ ಸಿಕ್ಕಿರಲಿಲ್ಲ. ಆದರೆ ಉನ್ನಿಕೃಷ್ಣನ್‌ ಪೊಟ್ಟಿಗೆ ಅಪಾಯಿಂಟ್ಮೆಂಟ್‌ ಸಿಕ್ಕಿದೆಯೇ? ಸೋನಿಯಾ ಹೆಚ್ಚಿನ ಭದ್ರತೆಯಿರುವ ನಾಯಕಿ. ಆರೋಪಿಗೆ ಹೇಗೆ ಅವರ ಭೇಟಿ ಸಾಧ್ಯವಾಯಿತು. ಸೋನಿಯಾ ಅವರು ಉನ್ನಿಕೃಷ್ಣನ್‌ ಪೊಟ್ಟಿ, ಗೋವರ್ಧನ್‌ರಿಂದ ಉಡುಗೊರೆ ಸ್ವೀಕರಿಸುತ್ತಿರುವ ಫೋಟೋವೊಂದನ್ನು ಸಿಎಂ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ ನಾಯಕರಿಗೂ ಗೊತ್ತು ಅವರ ಭೇಟಿ ಎಷ್ಟು ಕಷ್ಟ ಎನ್ನುವುದು. ಹಾಗಿದ್ದರೆ ಆರೋಪಿಗೆ ಹೇಗೆ ಸಿಕ್ಕಿತು ಅವರ ಭೇಟಿ ಅವಕಾಶ?’ ಎಂದು ಪ್ರಶ್ನಿಸಿದ್ದಾರೆ.

ಈ ಮೂಲಕ ಶಬರಿಮಲೆ ಚಿನ್ನದ ಅವ್ಯವಹಾರದ ತನಿಖೆಯನ್ನು ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದ ಕಾಂಗ್ರೆಸ್‌ ಮತ್ತು ಯುಡಿಎಫ್‌ಗೆ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್