ನವದೆಹಲಿ: ಕಾಂಗ್ರೆಸ್ ಪಕ್ಷದ ಮುಂದಿನ ನೀತಿ ಬಗ್ಗೆ ಚರ್ಚೆ ನಡೆಸಲು ದೆಹಲಿಯ ಎಐಸಿಸಿ ಕೇಂದ್ರ ಕಚೇರಿ ಇಂದಿರಾ ಭವನದಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ(CWC) ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದಾರೆ. ಸಭೆಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ರಾಜ್ಯದಲ್ಲಿ ಸಿಎಂ ಹುದ್ದೆ ಗೊಂದಲದ ನಡುವೆ ವಿಧಾನ ಮಂಡಲ ಚಳಿಗಾಲ ಅಧಿವೇಶನ ನಂತರ ಈ ಸಭೆ ನಡೆಯುತ್ತಿದೆ. ಕೇಂದ್ರ ಸರ್ಕಾರ ನರೇಗಾ ಹೆಸರು ಬದಲಾವಣೆ ಮಾಡಿದ್ದರ ಕುರಿತಾಗಿ, ಮುಂದಿನ ವರ್ಷ ಕೆಲವು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಕಾರ್ಯತಂತ್ರಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ.
ಶಶಿ ತರೂರ್ ಕೂಡ ಭಾಗಿ
ಇತ್ತೀಚೆಗೆ ಹಲವು ಬಾರಿ ಕಾಂಗ್ರೆಸ್ ಬಗ್ಗೆ ಟೀಕೆ ಮಾಡಿ ಕೇಂದ್ರ ಸರ್ಕಾರ, ಬಿಜೆಪಿ, ಪ್ರಧಾನಿ ಮೋದಿಯವರನ್ನು ಬೆಂಬಲಿಸಿ ಮಾತುಗಳನ್ನಾಡಿದ್ದ ಸಂಸದ ಶಶಿ ತರೂರ್ ಅವರು ಇಂದಿನ ಸಭೆಗೆ ಹಾಜರಾಗಿದ್ದಾರೆ. ತಡವಾಗಿ ಬಂದು ಅವಸರದಲ್ಲಿ ಅವರು ಹೋಗುವುದು ಕಂಡುಬಂತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದಾರೆ.