ಪಿಣರಾಯಿ ವಿಜಯನ್  
ದೇಶ

ಉತ್ತರ ಪ್ರದೇಶದಂತೆ ಕರ್ನಾಟಕ ಸರ್ಕಾರ 'ಬುಲ್ಡೋಜರ್ ನೀತಿ' ಅನುಸರಿಸುತ್ತಿದೆ: ಕೇರಳ ಸಿಎಂ ಪಿಣರಾಯಿ ವಿಜಯನ್ ತೀವ್ರ ಟೀಕೆ

ಈ ಚಳಿಯಲ್ಲಿ ಮಕ್ಕಳ, ಮಹಿಳೆಯರನ್ನು ಬೀದಿಗೆ ಹಾಕಿದ್ದಾರೆ ಎಂದು ಕೇರಳ ಮುಖ್ಯಮಂತ್ರಿಗಳು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು: ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರಿನ ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ, ಅಲ್ಲಿ ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿದ್ದವು. ಇದೀಗ ಏಕಾಏಕಿ ಈ ಚಳಿಗಾಲದಲ್ಲಿ ಮನೆಗಳನ್ನು ನೆಲಸಮ ಮಾಡಿದರೆ ಅವರು ಎಲ್ಲಿಗೆ ಹೋಗಬೇಕು. ಈ ಚಳಿಯಲ್ಲಿ ಮಕ್ಕಳ, ಮಹಿಳೆಯರನ್ನು ಬೀದಿಗೆ ಹಾಕಿದ್ದಾರೆ ಎಂದು ಕೇರಳ ಮುಖ್ಯಮಂತ್ರಿಗಳು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳನ್ನು ಬೀದಿಗೆ ಹಾಕಿ,ಬುಲ್ಡೋಜರ್ ರಾಜ್ ಕ್ರಮವನ್ನು ಕರ್ನಾಟಕ ಕಾಂಗ್ರೆಸ್​​ ಸರ್ಕಾರ ಅನುಸರಿಸುತ್ತಿದೆ” ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎಕ್ಸ್​​​ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

ದುಃಖಕರ ವಿಚಾರವೆಂದರೆ ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಈಗ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೂಡ ಮಾಡುತ್ತಿದೆ. ಭಯ ಮತ್ತು ಕ್ರೂರತೆಯ ಬಲದ ಮೂಲಕ ಆಡಳಿತ ನಡೆಸುವಾಗ, ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವ ಘನತೆಯು ಮೊದಲ ಬಲಿಪಶುಗಳಾಗುತ್ತವೆ. ಈ ಮೋಸದ ಪ್ರವೃತ್ತಿಯನ್ನು ವಿರೋಧಿಸಲು ಮತ್ತು ಸೋಲಿಸಲು ಎಲ್ಲಾ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು ಒಟ್ಟಾಗಿ ಒಟ್ಟುಗೂಡಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ