ಪರಮೇಶ್ವರ್ ಬೆಂಬಲಿಗರ ಪ್ರತಿಭಟನೆ 
ದೇಶ

ನವದೆಹಲಿ: 'ದಲಿತ ಸಿಎಂ' ಗಾಗಿ ಒತ್ತಾಯ, ಕಾಂಗ್ರೆಸ್ ಪ್ರದಾನ ಕಚೇರಿ ಬಳಿ ಪರಮೇಶ್ವರ್ ಬೆಂಬಲಿಗರ ಪ್ರತಿಭಟನೆ

ಒಂದು ವೇಳೆ ನಾಯಕತ್ವ ಮಾಡುವುದಾದರೆ ದಲಿತರಿಗೆ ಅದರಲ್ಲೂ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪ್ರದಾನ ಕಚೇರಿ ಮುಂಬೆ ಸುಮಾರು ಒಂದು ಡಜನ್ ಗೂ ಹೆಚ್ಚು ಮಂದಿ ಪ್ರತಿಭಟನೆ ನಡೆಸಿದರು.

ನವದೆಹಲಿ: ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಗುದ್ದಾಟ ಮುಂದುವರೆದಿರುವಂತೆಯೇ ರಾಷ್ಟ್ರ ರಾಜಧಾನಿಯಲ್ಲಿ 'ದಲಿತ ಸಿಎಂ' ಕೂಗು ಕೇಳಿಬಂದಿದೆ.

ಒಂದು ವೇಳೆ ನಾಯಕತ್ವ ಮಾಡುವುದಾದರೆ ದಲಿತರಿಗೆ ಅದರಲ್ಲೂ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪ್ರದಾನ ಕಚೇರಿ ಮುಂಬೆ ಸುಮಾರು ಒಂದು ಡಜನ್ ಗೂ ಹೆಚ್ಚು ಮಂದಿ ಶನಿವಾರ ಪ್ರತಿಭಟನೆ ನಡೆಸಿದರು.

ಇಂದಿರಾ ಭವನದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿರುವಾಗ ಬಾಬಾ ಸಾಹೇಬ್ ಅಂಬೇಡ್ಕರ್ ದಲಿತ ಸೇವಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸಿಎಂ ಸಿದ್ದರಾಮಯ್ಯ ಕೂಡಾ ಸಭೆಯಲ್ಲಿ ಪಾಲ್ಗೊಂಡಿದ್ದರು.

ದಲಿತ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆಗಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಭಾವಚಿತ್ರ ಒಳಗೊಂಡ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಲಾಯಿತು. ಸಂಸದ ತೋಲ್ ತಿರುಮಾವಳವನ್ ಕೂಡಾ ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಇದಕ್ಕೂ ಮುನ್ನಾ ಕಾಂಗ್ರೆಸ್ ಸಂಘಟನ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿಯಾದ ಸದಸ್ಯರು, ಡಾ. ಜಿ.ಪರಮೇಶ್ವರ್‌ಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಅಲ್ಲದೇ ಸೋನಿಯ ಗಾಂಧಿ ಅವರ ನಿವಾಸಕ್ಕೂ ಮನವಿ ಪತ್ರವನ್ನು ರವಾನಿಸಿದರು.

ಎಐಸಿಸಿ ಕಚೇರಿ ಬಳಿ ಮಾತನಾಡಿದ ಸದಸ್ಯರು, ದಲಿತ ಸಮುದಾಯ ದಶಕಗಳಿಂದ ಕಾಂಗ್ರೆಸ್ ಅನ್ನು ಬೆಂಬಲಿಸುತ್ತಾ ಬಂದಿದೆ. ಹೀಗಾಗಿ, ದಲಿತ ನಾಯಕರಿಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಜಿ.ಪರಮೇಶ್ವರ್ ಪಕ್ಷನಿಷ್ಠರಾಗಿ ಕೆಲಸ ಮಾಡುತ್ತಿದ್ದಾರೆ. 2013 ರಲ್ಲಿ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ 122 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ ಪರವಾಗಿ ನಿಂತಿದ್ದಾರೆ. ಈ ಹಿನ್ನೆಲೆ ದಲಿತರಿಗೆ ಸಿಎಂ ಸ್ಥಾನ ನೀಡುವ ಮೂಲಕ ನ್ಯಾಯ ನೀಡಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Assam: SIR ನಂತರ 10.56 ಲಕ್ಷ ಮತದಾರರ ಹೆಸರು ಡಿಲೀಟ್

2027 ರ ವೇಳೆಗೆ ಅಸ್ಸಾಂ ನಲ್ಲಿ ಶೇ.40 ರಷ್ಟು ಬಾಂಗ್ಲಾ ಮೂಲದ ಮುಸ್ಲಿಮರು; ಸ್ಥಳೀಯ ಜನಸಂಖ್ಯೆಗೆ ಕಾದಿದೆ ಆಪತ್ತು- ಹಿಮಂತ ಬಿಸ್ವ ಶರ್ಮ

ಬಿಜೆಪಿಗೆ ನೂತನ ಸಾರಥಿ: ಜನವರಿ 20ರೊಳಗೆ ನಿತಿನ್ ನಬಿನ್ 'ರಾಷ್ಟ್ರೀಯ ಅಧ್ಯಕ್ಷ'ರಾಗಿ ಆಯ್ಕೆ ಸಾಧ್ಯತೆ!

ಮಹಾರಾಷ್ಟ್ರದಲ್ಲಿ ಹೊಸ ಆಯಾಮ ಪಡೆದ 'ಮರಾಠಿ ಭಾಷಾ' ವಿವಾದ! ಆರು ವರ್ಷದ ಮಗಳನ್ನೇ ಕೊಂದ ತಾಯಿ!

ಮಧ್ಯಪ್ರದೇಶ: ಬಿಜೆಪಿ ನಾಯಕ ಚಲಾಯಿಸುತ್ತಿದ್ದ ಕಾರು ಗ್ರಾಮಸ್ಥರಿಗೆ ಡಿಕ್ಕಿ; ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ

SCROLL FOR NEXT