ಹಲ್ಲೆ ನಡೆಸುತ್ತಿರುವುದು. 
ದೇಶ

ತಮಿಳುನಾಡು: ವಲಸೆ ಕಾರ್ಮಿಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ; ರೀಲ್ಸ್ ಮಾಡಿ ಪೋಸ್ಟ್; ತೀವ್ರ ಆಕ್ರೋಶ

ಚೆನ್ನೈನಿಂದ ತಿರುತ್ತಣಿಗೆ ತೆರಳುತ್ತಿದ್ದ ಉಪನಗರ ರೈಲಿನೊಳಗೆ ನಾಲ್ವರು ಹದಿಹರೆಯದ ಬಾಲಕರು ಒಡಿಶಾದ ವಲಸೆ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾರೆ.

ಚೆನ್ನೈ: ವಲಸೆ ಕಾರ್ಮಿಕನ ಮೇಲೆ ಬಾಲಕರ ಗುಂಪೊಂದು ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ, ರೀಲ್ಸ್ ಮಾಡಿರುವ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದ್ದು, ಘಟನೆ ಬೆನ್ನಲ್ಲೇ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಚೆನ್ನೈನಿಂದ ತಿರುತ್ತಣಿಗೆ ತೆರಳುತ್ತಿದ್ದ ಉಪನಗರ ರೈಲಿನೊಳಗೆ ನಾಲ್ವರು ಹದಿಹರೆಯದ ಬಾಲಕರು ವಲಸೆ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾರೆ.

ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರೋಪಿಗಳಲ್ಲಿ ಒಬ್ಬ ಇನ್‌ಸ್ಟಾಗ್ರಾಮ್ ರೀಲ್ ಆಗಿ ಹಲ್ಲೆಯ ವಿಡಿಯೊವನ್ನು ಹಂಚಿಕೊಂಡಿದ್ದಾನೆ. ಮಚ್ಚನ್ನು ಹಿಡಿದು ತಮಿಳು ಹಾಡನ್ನು ಹಿನ್ನೆಲೆ ಸಂಗೀತವಾಗಿ ಬಳಸಿದ್ದಾನೆ.

ಮತ್ತೊಂದು ವಿಡಿಯೊದಲ್ಲಿ ಆರೋಪಿಗಳು ಕಾರ್ಮಿಕನಿಗೆ ಮಚ್ಚಿನಿಂದ ಹೊಡೆಯುತ್ತಿರುವುದು ಕಂಡುಬಂದಿದೆ. ನಂತರ ದಾಳಿಕೋರರಲ್ಲಿ ಒಬ್ಬರು ವಿಜಯದ ಚಿಹ್ನೆಯೊಂದಿಗೆ ಕಾರ್ಮಿಕನ ಪಕ್ಕದಲ್ಲಿ ಪೋಸ್ ನೀಡಿದ್ದಾನೆ. ಈ ದಾಳಿಯಲ್ಲಿ ಕಾರ್ಮಿಕ ರಕ್ತಸಿಕ್ತನಾಗಿ ಗಂಭೀರ ಗಾಯಗೊಂಡಿದ್ದಾನೆ.

ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಈ ಪೈಕಿ ಮೂವರನ್ನು ಚೆಂಗಲ್ಪಟ್ಟುವಿನ ಬಾಲಾಪರಾಧಿ ಜೈಲಿಗೆ ಕಳುಹಿಸಲಾಗಿದೆ. ನಾಲ್ಕನೇ ಆರೋಪಿಯನ್ನು ನ್ಯಾಯಾಲಯವು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಮಿಳುನಾಡಿನಲ್ಲಿ ವಲಸಿಗ ಕಾರ್ಮಿಕರ ಸುರಕ್ಷತೆ ಬಗ್ಗೆ ಹಲವರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ.ಗಳ ಆರ್ಥಿಕ ಬಲ- ಸಿಎಂ ಸಿದ್ದರಾಮಯ್ಯ

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಕ್ಕೆ 1 ಕೋಟಿ ರೂ.ದಂಡ!

T-20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

SCROLL FOR NEXT