ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಎಂಟು ನಕ್ಸಲರು ಬಲಿ

ಗಂಗಲೂರು ಪೊಲೀಸ್ ಠಾಣೆ ಪ್ರದೇಶದ ಕಾಡಿನಲ್ಲಿ ಇಂದು ಬೆಳಗ್ಗೆ 8.30 ರ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು "ನಕ್ಸಲೈಟ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ" ಗುಂಡಿನ ಚಕಮಕಿ ನಡೆಯಿತು.

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಎಂಟು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಗಲೂರು ಪೊಲೀಸ್ ಠಾಣೆ ಪ್ರದೇಶದ ಕಾಡಿನಲ್ಲಿ ಇಂದು ಬೆಳಗ್ಗೆ 8.30 ರ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು "ನಕ್ಸಲೈಟ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ" ಗುಂಡಿನ ಚಕಮಕಿ ನಡೆಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾ ಮೀಸಲು ಪಡೆ ಮತ್ತು ರಾಜ್ಯ ಪೊಲೀಸರ ವಿಶೇಷ ಕಾರ್ಯಪಡೆಯ ಸಿಬ್ಬಂದಿ, ಕೇಂದ್ರ ಮೀಸಲು ಪೊಲೀಸ್ ಪಡೆ(CRPF) ಮತ್ತು ಅದರ ಕೋಬ್ರಾ(ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಮಾವೋವಾದಿಗಳ 'ಪಶ್ಚಿಮ ಬಸ್ತಾರ್ ವಿಭಾಗ'ದ ಕೇಡರ್‌ಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಶುಕ್ರವಾರ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!