ದೇಶ

ಕೃಷಿ ಮೂಲಕ ಬಜೆಟ್ ಆರಂಭಿಸಿದ ಸಚಿವರು ರೈತರ ಬೇಡಿಕೆಗಳ ಬಗ್ಗೆ ಸಂಪೂರ್ಣ ಮೌನವಹಿಸಿದರು: ಕಾಂಗ್ರೆಸ್ ಟೀಕೆ

2025-26ರ ಕೇಂದ್ರ ಬಜೆಟ್ ತೆರಿಗೆ, ನಗರಾಭಿವೃದ್ಧಿ, ಗಣಿಗಾರಿಕೆ, ಹಣಕಾಸು ವಲಯ, ವಿದ್ಯುತ್ ಮತ್ತು ನಿಯಂತ್ರಕ ಚೌಕಟ್ಟಿನ ಆರು ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಪ್ರಾರಂಭಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಶನಿವಾರ ಮಂಡಿಸಿದ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿದ ಘೋಷಣೆಗಳ ಬಗ್ಗೆ ವಾಗ್ದಾಳಿ ನಡೆಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾನೂನುಬದ್ಧ ಖಾತರಿಯಾಗಿ ಕನಿಷ್ಠ ಬೆಂಬಲ ಬೆಲೆ(MSP) ಮತ್ತು ಕೃಷಿ ಸಾಲ ಮನ್ನಾ ಸೇರಿದಂತೆ ರೈತರ ಬೇಡಿಕೆಗಳ ಬಗ್ಗೆ ಸಂಪೂರ್ಣ ಮೌನವಾಗಿದ್ದಾರೆ ಎಂದು ಆರೋಪಿಸಿದೆ.

2025-26ರ ಕೇಂದ್ರ ಬಜೆಟ್ ತೆರಿಗೆ, ನಗರಾಭಿವೃದ್ಧಿ, ಗಣಿಗಾರಿಕೆ, ಹಣಕಾಸು ವಲಯ, ವಿದ್ಯುತ್ ಮತ್ತು ನಿಯಂತ್ರಕ ಚೌಕಟ್ಟಿನ ಆರು ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಪ್ರಾರಂಭಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ತಮ್ಮ ಬಜೆಟ್ ಭಾಷಣದಲ್ಲಿ, ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುವ ಪ್ರಧಾನ ಮಂತ್ರಿ ಧನ್ ಧ್ಯಾನ್ ಕೃಷಿ ಯೋಜನೆಯನ್ನು ಅವರು ಘೋಷಿಸಿದರು.

ಆದರೆ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, "ವಿತ್ತಮಂತ್ರಿ ಕೃಷಿಯಿಂದ ಬಜೆಟ್ ಮಂಡನೆ ಪ್ರಾರಂಭ ಮಾಡಿದರು. ಆದರೆ ರೈತರ ಬೇಡಿಕೆಗಳು ಮತ್ತು ಕೃಷಿ ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸುಗಳ ಬಗ್ಗೆ ಸಂಪೂರ್ಣವಾಗಿ ಮೌನವಾಗಿದ್ದಾರೆ. ಕಾನೂನು ಖಾತರಿಯಾಗಿ ಎಂಎಸ್ ಪಿ, ಕೃಷಿ ಸಾಲ ಮನ್ನಾ, ಪಿಎಂ ಕಿಸಾನ್ ಪಾವತಿಗಳ ಹಣದುಬ್ಬರ ಸೂಚ್ಯಂಕ ಮತ್ತು ಪಿಎಂ ಫಸಲ್ ಬಿಮಾ ಯೋಜನೆಗೆ ಸುಧಾರಣೆಗಳು ಇತ್ಯಾದಿಗಳ ಬಗ್ಗೆ ಮಾತನಾಡಲೇ ಇಲ್ಲ ಎಂದು ಹೇಳಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ಜೈರಾಮ್ ರಮೇಶ್, "ಫೇಕ್ ಇನ್ ಇಂಡಿಯಾ ಆಗಿ ಮಾರ್ಪಟ್ಟ ಮೇಕ್ ಇನ್ ಇಂಡಿಯಾ ಈಗ ರಾಷ್ಟ್ರೀಯ ಉತ್ಪಾದನಾ ಮಿಷನ್" ಎಂಬ ಹೊಸ ಹೆಸರು ಪಡೆದುಕೊಂಡಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT