ಸದನದಿಂದ ಹೊರನಡೆದ ವಿಪಕ್ಷಗಳು. 
ದೇಶ

ಬಜೆಟ್ 2025: ವಿಪಕ್ಷಗಳ ಗದ್ದಲ, ಸದನದಿಂದ ಹೊರ ನಡೆದ ಎಸ್​ಪಿ ಸಂಸದರು

ಬಜೆಟ್ ಮಂಡನೆ ಆರಂಭವಾಗುತ್ತಿದ್ದಂತೆಯೇ ಗದ್ದಲ ಸೃಷ್ಟಿಸಿದ ವಿಪಕ್ಷಗಳು, ಉತ್ತರಪ್ರದೇಶದ ಪ್ರಯಾಗ್ ರಾಜ್'ನ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ದುರಂತ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು.

ನವದೆಹಲಿ: ಸಂಸತ್ತಿನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸಕ್ತ ಸಾಲಿನ ಬಜೆಟ್​ ಮಂಡನೆ ಆರಂಭಿಸಿದ್ದು, ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಇದೇ ವೇಳೆ ವಿಪಕ್ಷಗಳು ಗದ್ದಲ ಸೃಷ್ಟಿಸಿದ್ದು, ಸಮಾಜವಾದಿ ಪಕ್ಷದ ಸಂಸದರು ಸದನದಿಂದ ಹೊರ ನಡೆದಿದ್ದಾರೆ.

ಬಜೆಟ್ ಮಂಡನೆ ಆರಂಭವಾಗುತ್ತಿದ್ದಂತೆಯೇ ಗದ್ದಲ ಸೃಷ್ಟಿಸಿದ ವಿಪಕ್ಷಗಳು, ಉತ್ತರಪ್ರದೇಶದ ಪ್ರಯಾಗ್ ರಾಜ್'ನ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ದುರಂತ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು.

ಆದರೆ, ಇದಕ್ಕೆ ಸ್ಪೀಕರ್ ಅನುಮತಿ ನಿರಾಕಸಿದರು, ಬಳಿಕ ನಿರ್ಮಲಾ ಅವರು ಬಜೆಟ್ ಮಂಡನೆ ಮಾಡುತ್ತಿದ್ದಂತೆಯೇ ಕೆಂಡಾಮಂಡಲಗೊಂಡ ಸಮಾಜವಾದಿ ಪಕ್ಷದ ಸಂಸದರು, ಸದನದಿಂದ ಹೊರನಡೆದರು.

ಬಳಿಕ ಬಜೆಟ್ ನಿರ್ಮಲಾ ಅವರು ಬಜೆಟ್ ಮಂಡನೆ ಆರಂಭಿಸಿದರು. ಗೌರವಾನ್ವಿತ ಸ್ಪೀಕರ್, ನಾನು 2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಪ್ರಸ್ತುತಪಡಿಸುತ್ತೇನೆ, ಅಭಿವೃದ್ದಿಯನ್ನು ಹೆಚ್ಚಿಸಲು ನಮ್ಮ ಪ್ರಯತ್ನಗಳನ್ನು ಮುಂದುವರಿಸುತ್ತೇವೆ. ಯುವಜನತೆ, ದಲಿತರು, ಅನ್ನದಾತರು ಮತ್ತು ಮಹಿಳೆಯರನ್ನು ಉದ್ದೇಶವಾಗಿಟ್ಟುಕೊಂಡು ಬಜೆಟ್ ಮಂಡಿಸಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ

ಮದ್ದೂರಿನಲ್ಲಿ ಕಲ್ಲು ತೂರಾಟ: ಲೈಟ್ ಆಫ್ ಮಾಡಿರುವುದು ಅನುಮಾನ ಮೂಡಿಸುತ್ತಿದೆ - IGP

Asia Cup 2025: "Kisne Bola?".. ಪತ್ರಕರ್ತನಿಗೆ Suryakumar Yadav ಖಡಕ್ ಉತ್ತರ, ಪಾಕ್ ಕ್ಯಾಪ್ಟನ್‌ಗೆ ಓಪನ್ ಚಾಲೆಂಜ್!

ಬೆಂಗಳೂರಿನಲ್ಲಿ ಮತ್ತೊಂದು ಡಿಜಿಟಲ್ ಅರೆಸ್ಟ್ ಹಗರಣ: 70 ವರ್ಷದ ವ್ಯಕ್ತಿಗೆ 30 ಲಕ್ಷ ರೂ.ಗೂ ಹೆಚ್ಚು ವಂಚನೆ!

ಮುಂದಿನ ಜನ್ಮದಲ್ಲಿ 'ಮುಸ್ಲಿಂ' ಆಗಿ ಹುಟ್ಟುವ ಆಸೆ: ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ವಿರುದ್ಧ ಬಿಜೆಪಿ ಕಿಡಿ! Video

SCROLL FOR NEXT