ಬಾಡಿಗೆ  online desk
ದೇಶ

Union Budget 2025: ತೆರಿಗೆ ಪಾವತಿಸುವವರಿಗೆ ಮತ್ತೊಂದು Good News: ಬಾಡಿಗೆ ಮೇಲಿನ TDS ಕಡಿತ ಮಿತಿಯಲ್ಲಿ ಭಾರಿ ಏರಿಕೆ!

12 ಲಕ್ಷದವರೆಗಿನ ಆದಾಯ ತೆರಿಗೆ ವಿನಾಯಿತಿಯ ಜೊತೆಗೆ ಬಾಡಿಗೆ ಮೇಲಿನ ಟಿಡಿಎಸ್ ಮಿತಿಯನ್ನು ವಾರ್ಷಿಕ 6 ಲಕ್ಷದವರೆಗೆ ಏರಿಕೆ ಮಾಡಿದ್ದಾರೆ.

ನವದೆಹಲಿ: ತೆರಿಗೆ ಪಾವತಿಸುವವರಿಗೆ ಕೇಂದ್ರ ಬಜೆಟ್ 2025 ರಲ್ಲಿ ನಿರ್ಮಲಾ ಸೀತಾರಾಮನ್ ಭರಪೂರ ಕೊಡುಗೆಗಳನ್ನು ಘೋಷಿಸಿದ್ದಾರೆ.

12 ಲಕ್ಷದವರೆಗಿನ ಆದಾಯ ತೆರಿಗೆ ವಿನಾಯಿತಿಯ ಜೊತೆಗೆ ಬಾಡಿಗೆ ಮೇಲಿನ ಟಿಡಿಎಸ್ ಮಿತಿಯನ್ನು ವಾರ್ಷಿಕ 6 ಲಕ್ಷದವರೆಗೆ ಏರಿಕೆ ಮಾಡಿದ್ದಾರೆ. ಈ ವರೆಗೆ ಬಾಡಿಗೆ ಮೇಲಿನ ಟಿಡಿಎಸ್ ಮಿತಿ 2.40 ಲಕ್ಷದವರೆಗೆ ಇತ್ತು. 2025-26 ನೇ ಆರ್ಥಿಕ ವರ್ಷದಿಂದ ಈ ಮಿತಿ ವಾರ್ಷಿಕ 6 ಲಕ್ಷಕ್ಕೆ ಏರಿಕೆಯಾಗಲಿದೆ.

"ಸರ್ಕಾರದ ಈ ಕ್ರಮದಿಂದಾಗಿ ಟಿಡಿಎಸ್‌ಗೆ ಒಳಪಡುವ ವಹಿವಾಟುಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ, ಹೀಗಾಗಿ ಸಣ್ಣ ಪಾವತಿಗಳನ್ನು ಪಡೆಯುವ ಸಣ್ಣ ತೆರಿಗೆ ಪಾವತಿದಾರರಿಗೆ ಪ್ರಯೋಜನವಾಗುತ್ತದೆ." ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

"ಇದು ಬಾಡಿಗೆಯ ಮೇಲಿನ ಟಿಡಿಎಸ್ ಕಡಿತದ ಮಾಸಿಕ ಮಿತಿಯನ್ನು 20,000 ರೂ.ಗಳಿಂದ 50,000 ರೂ.ಗಳಿಗೆ ಪರಿಣಾಮಕಾರಿಯಾಗಿ ಹೆಚ್ಚಿಸಿದ್ದು, ಸಣ್ಣ ತೆರಿಗೆದಾರರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಅನುಸರಣೆಯ ಹೊರೆಗಳನ್ನು ಕಡಿಮೆ ಮಾಡುತ್ತದೆ"

"ಹಿರಿಯ ನಾಗರಿಕರಿಗೆ ಬಡ್ಡಿಯ ಮೇಲಿನ ತೆರಿಗೆ ಕಡಿತದ ಮಿತಿಯನ್ನು ಪ್ರಸ್ತುತ 50,000 ರೂ.ಗಳಿಂದ 1,00,000 ರೂ.ಗಳಿಗೆ ದ್ವಿಗುಣಗೊಳಿಸಲಾಗುತ್ತಿದೆ" ಎಂದು ಅವರು ಹೇಳಿದರು. ಹೊಸ ಕ್ರಮವು ಟಿಡಿಎಸ್‌ಗೆ ಒಳಪಡುವ ವಹಿವಾಟುಗಳ ಸಂಖ್ಯೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ, ಇದು ಬಾಡಿಗೆ ಪಾವತಿಸುವ ವ್ಯಕ್ತಿಗಳು ಮತ್ತು ವ್ಯವಹಾರಗಳಿಗೆ ಸುಲಭವಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ