ಪ್ರಾತಿನಿಧಿಕ ಚಿತ್ರ 
ದೇಶ

Union Budget 2025: ಮುಂದಿನ 3 ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ

2025-26ರ ಕೇಂದ್ರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಅನುಕೂಲ ಮಾಡಿಕೊಡಲಿದೆ ಮತ್ತು ಇವುಗಳಲ್ಲಿ 200 ಕೇಂದ್ರಗಳನ್ನು ಈ ಆರ್ಥಿಕ ವರ್ಷದಲ್ಲಿಯೇ ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಪ್ರಕಟಿಸಿದ್ದಾರೆ.

2025-26ರ ಕೇಂದ್ರ ಬಜೆಟ್ ಮಂಡಿಸಿದ ಅವರು, ಗಿಗ್ ಕಾರ್ಮಿಕರಿಗೆ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂ-ಜೆಎವೈ) ಅಡಿಯಲ್ಲಿ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಕ್ರಮವು ಸುಮಾರು 1 ಕೋಟಿ ಕಾರ್ಮಿಕರಿಗೆ ಸಹಾಯ ಮಾಡುವ ಸಾಧ್ಯತೆಯಿದೆ ಎಂದು ಹೇಳಿದರು.

ಮುಂದಿನ ಐದು ವರ್ಷಗಳಲ್ಲಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ 75,000 ಸೀಟುಗಳನ್ನು ಸೇರಿಸುವ ಗುರಿಯನ್ನು ಹೊಂದಿದ್ದು, ಈ ವರ್ಷ 10,000 ಹೆಚ್ಚುವರಿ ಸೀಟುಗಳನ್ನು ಸೇರಿಸಲಾಗುವುದು. ನಮ್ಮ ಸರ್ಕಾರವು ಕಳೆದ 10 ವರ್ಷಗಳಲ್ಲಿ ಸುಮಾರು 1.1 ಲಕ್ಷ ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಸೀಟುಗಳನ್ನು ಸೇರಿಸಿದೆ. ಇದು ಶೇ. 130 ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದರು.

ಮುಂದಿನ ಮೂರು ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಅನುಕೂಲ ಮಾಡಿಕೊಡಲಿದೆ. ಈ ಪೈಕಿ 2025-26ರಲ್ಲಿಯೇ 200 ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.

ಎಲ್ಲ ಸರ್ಕಾರಿ ಪ್ರೌಢಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್