ಅರವಿಂದ್ ಕೇಜ್ರಿವಾಲ್ 
ದೇಶ

'ನೀವು 25 ಸಾವಿರ ರೂ ಕಳೆದುಕೊಳ್ಳುತ್ತೀರಾ!': ಬಿಜೆಪಿ ಕಾರ್ಯಕರ್ತರಿಗೆ ಕೇಜ್ರಿವಾಲ್!

ಫೆಬ್ರವರಿ 5 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕುವಂತೆ ದೆಹಲಿ ಮಾಜಿ ಸಿಎಂ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬಿಜೆಪಿ ಕಾರ್ಯಕರ್ತರನ್ನು ಒತ್ತಾಯಿಸಿದ್ದಾರೆ.

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಅಂತಿಮ ಹಂತದತ್ತ ಸಾಗಿದ್ದು, ಕೊನೆಯ ಕ್ಷಣದಲ್ಲಿ ಮತದಾರರ ಸೆಳೆಯುವ ಕಾರ್ಯ ನಡೆಯುತ್ತಿದ್ದು, ಇದೇ ವಿಚಾರವಾಗಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದಾರೆ.

ಫೆಬ್ರವರಿ 5 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕುವಂತೆ ದೆಹಲಿ ಮಾಜಿ ಸಿಎಂ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬಿಜೆಪಿ ಕಾರ್ಯಕರ್ತರನ್ನು ಒತ್ತಾಯಿಸಿದ್ದಾರೆ. ವಿಡಿಯೋ ಸಂದೇಶದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕರು ಕೂಡ ಆಗಿರುವ ಕೇಜ್ರಿವಾಲ್, ಬಿಜೆಪಿ ಬೆಂಬಲಿಗರೂ ಕೂಡ ನಮಗೆ ಮತ ನೀಡಬೇಕು. ಏಕೆಂದರೆ ನಾವು ಅಷ್ಟು ಒಳ್ಳೆಯ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಮೂಲಕ ಭಾರತೀಯ ಜನತಾ ಪಕ್ಷದ ಬೆಂಬಲಿಗರು ಸಹ ತಿಂಗಳಿಗೆ 25,000 ರೂ.ಗಳವರೆಗೆ ಉಳಿತಾಯ ಮಾಡುತ್ತಿದ್ದಾರೆ ಎಂದು ಹೇಳಿದರು.

'ನಾನು ಅವರನ್ನು ಕೇಳಿದೆ, ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಎಲ್ಲಿಗೆ ಹೋಗುತ್ತೀರಿ? ಬಿಜೆಪಿ ಆಡಳಿತವಿರುವ ಎಷ್ಟು ರಾಜ್ಯಗಳಲ್ಲಿ ಉತ್ತಮ ಸರ್ಕಾರಿ ಶಾಲೆಗಳಿವೆ? ಬಿಜೆಪಿ ಆಡಳಿತವಿರುವ ಎಷ್ಟು ರಾಜ್ಯಗಳಲ್ಲಿ ಉಚಿತ ವಿದ್ಯುತ್ ಮತ್ತು 24/7 ವಿದ್ಯುತ್ ಲಭ್ಯವಿದೆ? ನಿಮಗಾಗಿ ಮತ ಚಲಾಯಿಸಿ ಮತ್ತು 'ಜಾಡು' (ಪೊರಕೆ) ಗುಂಡಿಯನ್ನು ಒತ್ತಿ" ಎಂದು ತಮ್ಮ ಪಕ್ಷದ ಚಿಹ್ನೆಯನ್ನು ಉಲ್ಲೇಖಿಸಿ ಕೇಜ್ರಿವಾಲ್ ಹೇಳಿದರು.

ಅಂತೆಯೇ ಎಎಪಿ ಸರ್ಕಾರದ ಅಡಿಯಲ್ಲಿ, ದೆಹಲಿಯ ಕುಟುಂಬವು ಉಚಿತ ವಿದ್ಯುತ್, ನೀರು, ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆಗಳ ಕಾರಣದಿಂದಾಗಿ ತಿಂಗಳಿಗೆ ಸುಮಾರು 25,000 ರೂ.ಗಳನ್ನು ಉಳಿಸುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಈ ಉಳಿತಾಯಗಳು ಅಪಾಯದಲ್ಲಿರುತ್ತವೆ. ನಮ್ಮ ಉಚಿತ ಕಲ್ಯಾಣ ಉಪಕ್ರಮಗಳ ಮೂಲಕ ಜನರು ಎಷ್ಟು ಉಳಿತಾಯ ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಬಹುದು.

ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಸೇವೆಗಾಗಿ ಸಂಜೀವನಿ ಯೋಜನೆ ಮತ್ತು ಮೆಟ್ರೋ ದರದಲ್ಲಿ ಶೇಕಡಾ 50 ರಷ್ಟು ರಿಯಾಯಿತಿಯೊಂದಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದಂತಹ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ ಹೊಸ ಯೋಜನೆಗಳು ಜನರ ಮಾಸಿಕ ಉಳಿತಾಯಕ್ಕೆ ಇನ್ನೂ 10,000 ರೂ.ಗಳನ್ನು ಸೇರಿಸುತ್ತವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಶುಕ್ರವಾರ, ಎಎಪಿ ಮುಖ್ಯಸ್ಥರು ಎಎಪಿ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಎತ್ತಿ ತೋರಿಸುವ 'ಬಚತ್ ಪತ್ರ' ಅಭಿಯಾನವನ್ನು ಪ್ರಾರಂಭಿಸಿದರು. ಈ ವೇಳೆ ಮತದಾರರು 'ಜಾಡು (ಪೊರಕೆ)' ಗುಂಡಿಯನ್ನು ಒತ್ತುವ ಮೂಲಕ ಮತ್ತೆ ಎಎಪಿಯನ್ನು ಆರಿಸಿದರೆ ಇದು ಒಟ್ಟು ಮಾಸಿಕ ಉಳಿತಾಯವನ್ನು 35,000 ರೂ.ಗಳಿಗೆ ತೆಗೆದುಕೊಂಡು ಹೋಗುತ್ತದೆ ಎಂದು ಹೇಳಿದರು. ಅಲ್ಲದೆ ಇದೇ ವೇಳೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನೀಡಲಾಗುತ್ತಿರುವ ಪ್ರಯೋಜನಗಳ ಬಗ್ಗೆಯೂ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 5 ರಂದು ಚುನಾವಣೆ ನಡೆಯಲಿದ್ದು, ಫಲಿತಾಂಶಗಳು ಫೆಬ್ರವರಿ 8 ರಂದು ಹೊರಬೀಳಲಿವೆ. 2020 ರಲ್ಲಿ 70 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿದ್ದ ಎಎಪಿ ಸತತ 2ನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಇದೀಗ ಎಎಪಿ ಸತತ ಮೂರನೇ ಅವಧಿಗೆ ಪ್ರಯತ್ನಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT