ಲೋಕಸಭೆ ಸಾಂದರ್ಭಿಕ ಚಿತ್ರ 
ದೇಶ

ಒಂದು ರಾಷ್ಟ್ರ ಒಂದು ಚುನಾವಣೆ: ಸಂಸತ್ತಿನಲ್ಲಿ ವಿಪಕ್ಷಗಳನ್ನು ಎದುರಿಸಲು NDA ಕಾರ್ಯತಂತ್ರ!

ಉದ್ದೇಶಿತ ಮಸೂದೆಯ ಸುಗಮ ಮಂಡನೆಗೆ ಎದುರಾಗಿರುವ ಎಲ್ಲಾ ಕಾನೂನು ಅಡೆತಡೆಗಳನ್ನು ನಿವಾರಿಸುವತ್ತ ಸರ್ಕಾರ ತನ್ನ ಗಮನ ಹರಿಸಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ನವದೆಹಲಿ: 'ಒಂದು ರಾಷ್ಟ್ರ, ಒಂದು ಚುನಾವಣೆ' (ಒಎನ್‌ಒಇ) ಉಪಕ್ರಮಕ್ಕೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ತನ್ನ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದೆ. ಪ್ರತಿಪಕ್ಷಗಳನ್ನು ಎದುರಿಸಲು ಮತ್ತು ಮಹತ್ವದ ಮಸೂದೆಯನ್ನು ಹೇಗೆ ಮಂಡಿಸುವುದು ಎಂಬುದರ ಕುರಿತು ಕಾರ್ಯತಂತ್ರ ರೂಪಿಸಲು ಇತ್ತೀಚೆಗೆ ಎನ್‌ಡಿಎ ಸಭೆ ನಡೆಸಿತು.

ಉದ್ದೇಶಿತ ಮಸೂದೆಯ ಸುಗಮ ಮಂಡನೆಗೆ ಎದುರಾಗಿರುವ ಎಲ್ಲಾ ಕಾನೂನು ಅಡೆತಡೆಗಳನ್ನು ನಿವಾರಿಸುವತ್ತ ಸರ್ಕಾರ ತನ್ನ ಗಮನ ಹರಿಸಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಂಪುಟ ಈಗಾಗಲೇ ಒಪ್ಪಿಗೆ ನೀಡಿದೆ. ONOE ವ್ಯವಸ್ಥೆಯ ಅಗತ್ಯತೆ ಮತ್ತು ಸಂಭಾವ್ಯ ಪ್ರಯೋಜನಗಳನ್ನು, ವಿಶೇಷವಾಗಿ ಚುನಾವಣಾ ಸಂಬಂಧಿತ ವೆಚ್ಚಗಳನ್ನು ಕಡಿಮೆ ಮಾಡಲು, ಆಡಳಿತದ ದಕ್ಷತೆಯನ್ನು ಸುಧಾರಿಸಲು ಮತ್ತು ಹೆಚ್ಚು ಸುವ್ಯವಸ್ಥಿತವಾಗಿ ಚುನಾವಣೆ ನಡೆಸುವ ಸಂದೇಶವನ್ನು ನೇರವಾಗಿ ಸಾರ್ವಜನಿಕರಿಗೆ ಕೊಂಡೊಯ್ಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಂತ್ರಿಗಳಿಗೆ ನಿರ್ದೇಶಿಸಿದ್ದಾರೆ ಎಂದು ಮೂಲಗಳು ಸೂಚಿಸಿವೆ.

ಮಸೂದೆಯ ಪ್ರಯೋಜನಗಳ ಬಗ್ಗೆ ಸಾರ್ವಜನಿಕರೊಂದಿಗೆ ತೊಡಗಿಸಿಕೊಳ್ಳುವ ಮೂಲಕ ವ್ಯಾಪಕ ಬೆಂಬಲ ಪಡೆದು ಎದುರಾಗಬಹುದಾದ ಸಂಭಾವ್ಯ ಪ್ರತಿಪಕ್ಷಗಳ ವಿರೋಧ ಹಾಗೂ ಕಾನೂನು ಸವಾಲುಗಳನ್ನು ಎದುರಿಸಬಹುದು ಎಂಬ ಆಶಾವಾದವನ್ನು ಸರ್ಕಾರ ಇಟ್ಟುಕೊಂಡಿದೆ. ವಿರೋಧ ಪಕ್ಷಗಳು ಒಡ್ಡುವ ಯಾವುದೇ ಸವಾಲುಗಳನ್ನು ಎದುರಿಸುವ ಗುರಿಯನ್ನು ಹೊಂದಿದೆ ಎಂದು ಮೂಲವೊಂದು ತಿಳಿಸಿದೆ.

ವಕ್ಫ್ ತಿದ್ದುಪಡಿ ಮಸೂದೆಯ ನಂತರ, NDA ನಾಯಕರು 2029 ರಲ್ಲಿ ನಡೆಯಲಿರುವ ಮುಂದಿನ ಸಾರ್ವತ್ರಿಕ ಚುನಾವಣೆಗೂ ಮುಂಚಿತವಾಗಿ ONOE ನ ಸಕಾರಾತ್ಮಕ ಅಂಶಗಳನ್ನು ಒತ್ತಿಹೇಳಲು ಉತ್ಸುಕರಾಗಿದ್ದಾರೆ.

ONOE ಮಸೂದೆಯು ಮತ್ತೊಂದು ಪ್ರಮುಖ ಶಾಸಕಾಂಗ ಆದ್ಯತೆಯಾಗಿರುವುದರಿಂದ, NDA ಸರ್ಕಾರವು ಎಲ್ಲಾ ಮಿತ್ರಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯಿಂದ ಮುಂದುವರಿಯಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಬಿಜೆಪಿಯ ನಾಯಕರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT