ಸೋನಿಯಾ ಗಾಂಧಿ-ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು  
ದೇಶ

ರಾಷ್ಟ್ರಪತಿ ವಿರುದ್ಧ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಹಕ್ಕುಚ್ಯುತಿ ಮಂಡನೆ

ಸೋನಿಯಾ ಹೇಳಿಕೆ "ಅತ್ಯುನ್ನತ ಹುದ್ದೆಯ ಘನತೆಯನ್ನು ಕುಗ್ಗಿಸುವ" ಉದ್ದೇಶವನ್ನು ಹೊಂದಿದೆ ಎಂದು ಬಿಜೆಪಿ ಸಂಸದರು ಆರೋಪಿಸಿದ್ದಾರೆ.

ನವದೆಹಲಿ: ಕಳೆದ ವಾರ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು "ಅವಮಾನಿಸಿದ್ದಾರೆ ಮತ್ತು ಮಾನಹಾನಿಕರ ಪದ" ಬಳಸಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಸಂಸದರು ಸೋಮವಾರ ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ ವಿರುದ್ಧ ಸಂಸತ್ತಿನ ಹಕ್ಕುಚ್ಯುತಿ ನಿರ್ಣಯ ಮಂಡಿಸಿದರು.

ಸೋನಿಯಾ ಹೇಳಿಕೆ "ಅತ್ಯುನ್ನತ ಹುದ್ದೆಯ ಘನತೆಯನ್ನು ಕುಗ್ಗಿಸುವ" ಉದ್ದೇಶವನ್ನು ಹೊಂದಿದೆ ಎಂದು ಬಿಜೆಪಿ ಸಂಸದರು ಆರೋಪಿಸಿದ್ದಾರೆ.

"ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಅವರು ಇತ್ತೀಚೆಗೆ ಭಾರತದ ರಾಷ್ಟ್ರಪತಿಗಳ ವಿರುದ್ಧ ಬಳಸಿದ ಕೆಲವು ಅಸಂಸದೀಯ, ಅವಹೇಳನಕಾರಿ ಹೇಳಿಕೆಗಳ ಬಗ್ಗೆ ನಾವು ತೀವ್ರ ನಿರಾಶೆಯಿಂದ ಹಕ್ಕುಚ್ಯುತಿ ಮಂಡಿಸುತ್ತಿದ್ದೇವೆ. ಇದು ಗಂಭೀರ ಪರಿಗಣನೆ ಮತ್ತು ಶಿಸ್ತು ಕ್ರಮಕ್ಕೆ ಅರ್ಹವಾಗಿವೆ" ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ರಾಷ್ಟ್ರಪತಿಗಳು ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ನಂತರ, ಮುರ್ಮು ಅವರು ಕೊನೆಯವರೆಗೂ ತುಂಬಾ ದಣಿದಿದ್ದರು... ಅವರಿಗೆ ಮಾತನಾಡಲು ಕಷ್ಟವಾಗುತ್ತಿತ್ತು. ಕಳಪೆ ವಿಷಯ" ಎಂದು ಕಾಂಗ್ರೆಸ್ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಾತಿ ಗಣತಿ ಅವಧಿ ವಿಸ್ತರಣೆ; ರಾಜ್ಯಾದ್ಯಂತ ಶಾಲಾ ಸಮಯವೂ ಬದಲಾವಣೆ

'ಶೂ ಎಸೆತ': CJI ಬಿಆರ್ ಗವಾಯಿ ಜೊತೆ ಮಾತನಾಡಿದ ಪ್ರಧಾನಿ ಮೋದಿ; ಹೇಳಿದ್ದೇನು?

ಸಿಸಿಟಿವಿ ಡೇಟಾ ಹೈಕೋರ್ಟ್‌ಗಳೊಂದಿಗೆ ಮಾತ್ರ ಹಂಚಿಕೊಳ್ಳಬಹುದು: CEC ಜ್ಞಾನೇಶ್ ಕುಮಾರ್

ಕಾಂತಾರ: ಚಾಪ್ಟರ್ 1: ಕರ್ನಾಟಕದಲ್ಲಿ 4ನೇ ದಿನಕ್ಕೇ KGF 2 ಕಲೆಕ್ಷನ್‌ ಧೂಳಿಪಟ!

ನಟ ವಿಜಯ್ ದೇವರಕೊಂಡ ಕಾರು ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು!

SCROLL FOR NEXT