ಹೇಮಾ ಮಾಲಿನಿ 
ದೇಶ

ಕುಂಭಮೇಳ ಕಾಲ್ತುಳಿತ 'ದೊಡ್ಡ ಘಟನೆಯೇನಲ್ಲ': ಬಿಜೆಪಿ ಸಂಸದೆ ಹೇಮಾ ಮಾಲಿನಿ

ಜನವರಿ 29, ಮೌನಿ ಅಮವಾಸ್ಯೆಯಂದು ಸಂಭವಿಸಿದ ಕಾಲ್ತುಳಿತದಲ್ಲಿ ನೂರಾರು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ನವದೆಹಲಿ: ಮಹಾ ಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ "ದೊಡ್ಡ ಘಟನೆಯೇನಲ್ಲ". ಆದರೆ ಅದನ್ನು "ದೊಡ್ಡದಾಗಿ ಬಿಂಬಿಸಲಾಗುತ್ತಿದೆ" ಎಂದು ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರು ಮಂಗಳವಾರ ಹೇಳಿದ್ದಾರೆ. ಸಭೆಯನ್ನು ಉತ್ತಮವಾಗಿ ನಿರ್ವಹಿಸಲಾಗುತ್ತಿದೆ ಎಂದು ಅವರು ಮಂಗಳವಾರ ಹೇಳಿದ್ದಾರೆ.

ಜನವರಿ 29, ಮೌನಿ ಅಮವಾಸ್ಯೆಯಂದು ಸಂಭವಿಸಿದ ಕಾಲ್ತುಳಿತದಲ್ಲಿ ನೂರಾರು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದ ಅಧಿಕೃತ ಅಂಕಿಅಂಶಗಳ ಪ್ರಕಾರ, ಪ್ರಯಾಗ್‌ರಾಜ್‌ನ ಸಂಗಮ್ ಪ್ರದೇಶದಲ್ಲಿ ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಜನ ಪ್ರಾಣ ಕಳೆದುಕೊಂಡಿದ್ದು, 60 ಮಂದಿ ಗಾಯಗೊಂಡಿದ್ದಾರೆ.

"ನಾವು ಕುಂಭಕ್ಕೆ ಹೋಗಿದ್ದೆವು... ನಾವು ಚೆನ್ನಾಗಿ ಸ್ನಾನ ಮಾಡಿದೆವು... ಎಲ್ಲವನ್ನೂ ಚೆನ್ನಾಗಿ ನಿರ್ವಹಿಸಲಾಗಿತ್ತು. ಇದರ ಹೊರತಾಗಿಯೂ ಘಟನೆ(ಕಾಲ್ತುಳಿತ) ನಡೆದಿದ. ಅದು ದೊಡ್ಡ ಘಟನೆಯೇನಲ್ಲ. ಆದರೆ ಅದನ್ನು ದೊಡ್ಡದಾಗಿ ಬಿಂಬಿಸಲಾಗುತ್ತಿದೆ... ಕುಂಭ ಮೇಳವನ್ನು ತುಂಬಾ ಚೆನ್ನಾಗಿ ನಿರ್ವಹಿಸಲಾಗಿದೆ. ತುಂಬಾ ಜನರು ಬರುತ್ತಿದ್ದಾರೆ, ಅದನ್ನು ನಿರ್ವಹಿಸುವುದು ತುಂಬಾ ಕಷ್ಟ. ಆದರೆ ನಾವು ನಮ್ಮ ಕೈಲಾದಷ್ಟು ಮಾಡುತ್ತಿದ್ದೇವೆ..." ಎಂದು ಹೇಮಾ ಮಾಲಿನಿ ಸಂಸತ್ ಭವನದ ಸಂಕೀರ್ಣದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಸರ್ಕಾರ ಮರೆಮಾಚುತ್ತಿದೆ ಎಂದು ವಿರೋಧ ಪಕ್ಷದ ಸದಸ್ಯರು ಆರೋಪಿಸಿರುವ ಬಗ್ಗೆ ಕೇಳಿದಾಗ, "ಅವರು ಏನು ಬೇಕಾದರೂ ಹೇಳುತ್ತಾರೆ... ತಪ್ಪು ತಪ್ಪಾಗಿ ಹೇಳುವುದೇ ಅವರ ಕೆಲಸ" ಎಂದರು.

ಮಹಾ ಕುಂಭದಲ್ಲಿ ನಡೆದ ಕಾಲ್ತುಳಿತ ದುರಂತವು ಮಂಗಳವಾರ ಸಂಸತ್ತಿನ ಎರಡೂ ಸದನಗಳಲ್ಲೂ ಪ್ರತಿಧ್ವನಿಸಿದ್ದು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ಸರ್ಕಾರವು ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಮರೆಮಾಚುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ