ದೇಶ

'ತಪ್ಪಾಗಿರದಿದ್ದರೆ ಕುಂಭ ಮೇಳ ಕಾಲ್ತುಳಿತದಲ್ಲಿ ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?': ಅಖಿಲೇಶ್ ಯಾದವ್ ಪ್ರಶ್ನೆ

ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಕನ್ನೌಜ್ ಕ್ಷೇತ್ರದ ಸಂಸದ ಅಖಿಲೇಶ್ ಯಾದವ್ , ಕಾಲ್ತುಳಿತದಲ್ಲಿ ಮೃತಪಟ್ಟವರ ನಿಜವಾದ ಅಂಕಿಅಂಶಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು ಮತ್ತು ಸರ್ವಪಕ್ಷ ಸಭೆಗೆ ಕರೆ ನೀಡಿದರು.

ಕಳೆದ ವಾರ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಕನ್ನೌಜ್ ಕ್ಷೇತ್ರದ ಸಂಸದ ಅಖಿಲೇಶ್ ಯಾದವ್ , ಕಾಲ್ತುಳಿತದಲ್ಲಿ ಮೃತಪಟ್ಟವರ ನಿಜವಾದ ಅಂಕಿಅಂಶಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು ಮತ್ತು ಸರ್ವಪಕ್ಷ ಸಭೆಗೆ ಕರೆ ನೀಡಿದರು.

ಸರ್ಕಾರ ನಿರಂತರವಾಗಿ ಬಜೆಟ್ ಅಂಕಿಅಂಶಗಳನ್ನು ನೀಡುತ್ತಿರುವಾಗ, ದಯವಿಟ್ಟು ಮಹಾಕುಂಭದಲ್ಲಿ ಮೃತಪಟ್ಟವರ ಅಂಕಿಅಂಶಗಳನ್ನು ಸಹ ನೀಡಿ. ಮಹಾಕುಂಭದ ವ್ಯವಸ್ಥೆಗಳ ಬಗ್ಗೆ ಸ್ಪಷ್ಟೀಕರಣ ನೀಡಲು ಸರ್ವಪಕ್ಷ ಸಭೆ ಕರೆಯಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಹೇಳಿದರು.

ಮಹಾಕುಂಭ ದುರ್ಘಟನೆಯಲ್ಲಿ ಮೃತಪಚ್ಚವರ ಅಂಕಿಅಂಶಗಳು, ಗಾಯಾಳುಗಳ ಚಿಕಿತ್ಸೆ, ಔಷಧಿಗಳು, ವೈದ್ಯರ ಲಭ್ಯತೆ, ಆಹಾರ, ನೀರು ಮತ್ತು ಸಾರಿಗೆ ವಿವರಗಳನ್ನು ಸಂಸತ್ತಿನಲ್ಲಿ ಮಂಡಿಸಬೇಕು ಎಂದು ಒತ್ತಾಯಿಸಿದರು.

ಕಾಲ್ತುಳಿತ ಘಟನೆಗೆ ಹೊಣೆಯಾಗುವವರ ​​ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಯಾವುದೇ ತಪ್ಪು ನಡೆದಿಲ್ಲದಿದ್ದರೆ ಸರ್ಕಾರ ಅಂಕಿಅಂಶಗಳನ್ನು ಏಕೆ ಮುಚ್ಚಿಡುತ್ತಿದೆ ಎಂದು ಪ್ರಶ್ನಿಸಿದರು.

ಮಹಾ ಕುಂಭಮೇಳ ದುರಂತಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಸತ್ಯವನ್ನು ಮರೆಮಾಚುವವರನ್ನು ಶಿಕ್ಷಿಸಬೇಕು. ಯಾವುದೇ ಅಪರಾಧವಿಲ್ಲದಿದ್ದರೆ, ಡಬಲ್ ಎಂಜಿನ್ ಸರ್ಕಾರ ಏಕೆ ಕಾಲ್ತುಳಿತದ ಬಗ್ಗೆ ನಿಖರ ಮಾಹಿತಿ ನೀಡುತ್ತಿಲ್ಲ, ಅಂಕಿಅಂಶಗಳನ್ನು ಏಕೆ ಮರೆಮಾಚುತ್ತಿದೆ ಎಂದು ಕೇಳಿದರು.

ಉತ್ತರ ಪ್ರದೇಶ ಸರ್ಕಾರ ಒದಗಿಸಿದ ಅಂಕಿಅಂಶಗಳ ಪ್ರಕಾರ, ಜನವರಿ 29 ರಂದು ಮಹಾಕುಂಭದಲ್ಲಿ ಮೌನಿ ಅಮವಾಸ್ಯೆಯ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟು 60 ಜನರು ಗಾಯಗೊಂಡಿದ್ದಾರೆ.

ನಿನ್ನೆ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರು ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸಿದರು, ಕೇಂದ್ರ ಸರ್ಕಾರ ಮೃತಪಟ್ಟವರ ಬಗ್ಗೆ ನಿಖರ ಮಾಹಿತಿ ನೀಡಬೇಕು. ದುರಂತದ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕೆಂದು ಎಂದು ಸಾಮೂಹಿಕವಾಗಿ ಒತ್ತಾಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

US-Israel Iran War: ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದೇ ಆದರೆ, ರಾಜ್ಯದ ಆರ್ಥಿಕತೆ ಮೇಲೆ ಭಾರೀ ಹೊಡೆತ..!

Israel-Iran war: Dohaದಲ್ಲಿ ಸಿಲುಕಿದ Indian basketball team, ತಂಡದಲ್ಲಿದ್ದಾರೆ ಮೂವರು ಕನ್ನಡಿಗರು..!

'ನಾನೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗೊತ್ತು, ಖಂಡಿತಾ ನಮ್ಮಿಬ್ಬರದ್ದು ಹಾಲು-ಜೇನಿನ ಸಂಬಂಧ': D K ಶಿವಕುಮಾರ್

ವಾಯುಮಾರ್ಗ ಬಂದ್ ಎಫೆಕ್ಟ್: ದುಬೈಗೆ ಹೊರಟ Emirates ವಿಮಾನ KIAಗೆ ವಾಪಸ್

SCROLL FOR NEXT