ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸುತ್ತಿದ್ದು, ನಾಳೆ ಬೆಳಗ್ಗೆ 11 ಗಂಟೆ ಸುಮಾರಿಗೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಪೌಷ ಪೂರ್ಣಿಮೆಯಂದು(ಜನವರಿ 13, 2025) ಪ್ರಾರಂಭವಾದ ಮಹಾ ಕುಂಭಮೇಳ 2025, ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮೇಳವಾಗಿದ್ದು, ಪ್ರಪಂಚದಾದ್ಯಂತದ ಭಕ್ತರನ್ನು ಆಕರ್ಷಿಸುತ್ತಿದೆ.
ಫೆಬ್ರವರಿ 26 ರಂದು ಮಹಾಶಿವರಾತ್ರಿಯವರೆಗೆ ಈ ಮಹಾ ಕುಂಭ ನಡೆಯಲಿದೆ ಎಂದು ಪ್ರಧಾನಿ ಕಚೇರಿ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.
ಪ್ರಧಾನಿ ಮೋದಿ ಅವರು ಫೆಬ್ರವರಿ 5 ರಂದು ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳ 2025ರಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರಧಾನಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸುವ ಮತ್ತು ಸಂರಕ್ಷಿಸುವ ಬದ್ಧತೆಗೆ ಅನುಗುಣವಾಗಿ, ತೀರ್ಥಯಾತ್ರೆಯ ಸ್ಥಳಗಳಲ್ಲಿ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಹೆಚ್ಚಿಸಲು ಪ್ರಧಾನಿ ಮೋದಿ ನಿರಂತರವಾಗಿ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಪ್ರಕಟಣೆ ಹೇಳಿದೆ. ತಿಳಿಸಿದೆ.