ಸಾಂದರ್ಭಿಕ ಚಿತ್ರ 
ದೇಶ

ಉತ್ತರಾಖಂಡ: ಯುಸಿಸಿ ಜಾರಿಯಾಗಿ 10 ದಿನಗಳಲ್ಲಿ 1 ಲಿವ್​-ಇನ್-ರಿಲೇಷನ್​ಶಿಪ್‌ ನೋಂದಣಿ

ಕಡ್ಡಾಯ ನೋಂದಣಿಗಾಗಿ ಲಿವ್-ಇನ್ ಜೋಡಿಗಳಿಂದ ಐದು ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ(UCC) ಜಾರಿಗೆ ಬಂದು 10 ದಿನಗಳಲ್ಲಿ ಪೋರ್ಟಲ್‌ನಲ್ಲಿ ಕೇವಲ ಒಂದು ಲಿವ್​-ಇನ್-ರಿಲೇಷನ್​ಶಿಪ್‌ ನೋಂದಾಯಿಸಲಾಗಿದೆ.

ಕಡ್ಡಾಯ ನೋಂದಣಿಗಾಗಿ ಲಿವ್-ಇನ್ ಜೋಡಿಗಳಿಂದ ಐದು ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಒಬ್ಬರಿಗೆ ನೋಂದಣಿ ನೀಡಲಾಗಿದೆ ಮತ್ತು ಇತರ ನಾಲ್ವರ ಅರ್ಜಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಜನವರಿ 27 ರಂದು, ಬಿಜೆಪಿ ಆಡಳಿತದ ಉತ್ತರಾಖಂಡವು ಸ್ವತಂತ್ರ ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದ ಮೊದಲ ರಾಜ್ಯವಾಯಿತು. ಇದು ಎಲ್ಲಾ ಧರ್ಮಗಳಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಕಾನೂನುಗಳನ್ನು ಉತ್ತೇಜಿಸುತ್ತದೆ.

ಆದರೆ ಲಿವ್-ಇನ್ ಸಂಬಂಧಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು ಎಂಬ ಯುಸಿಸಿಯ ನಿಬಂಧನೆಯು ಜನರ ಖಾಸಗಿತನದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹಲವರು ಟೀಕಿಸಿದ್ದರು.

ಆದಾಗ್ಯೂ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಲಿವ್-ಇನ್ ಜೋಡಿಗಳ ಕಡ್ಡಾಯ ನೋಂದಣಿಯು ಶ್ರದ್ಧಾ ವಾಲ್ಕರ್ ಅವರ ಕೊಲೆಯಂತಹ ಕ್ರೂರ ಘಟನೆಗಳನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಹೇಳುವ ಮೂಲಕ ಅದನ್ನು ಸಮರ್ಥಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!