ರ‍್ಯಾಗಿಂಗ್ ಸಾಂದರ್ಭಿಕ ಚಿತ್ರ 
ದೇಶ

ರ‍್ಯಾಗಿಂಗ್ ನಿಯಮ ಉಲ್ಲಂಘನೆ: 18 ವೈದ್ಯಕೀಯ ಕಾಲೇಜುಗಳಿಗೆ ಯುಜಿಸಿ ನೋಟಿಸ್

ಈ ಕಾಲೇಜ್ ಗಳು ರ‍್ಯಾಗಿಂಗ್ ಪಿಡುಗನ್ನು ತಡೆಯಲು ರ‍್ಯಾಗಿಂಗ್ ವಿರೋಧಿ ನೀತಿ 2009ರ ಅನ್ವಯ ಅಗತ್ಯ ಕ್ರಮಗಳನ್ನು ಕೈಗೊಳ್ಳದಿರುವುದು ಕಂಡುಬಂದಿದೆ.

ನವದೆಹಲಿ: ರ‍್ಯಾಗಿಂಗ್ ವಿರೋಧಿ ನಿಯಮಗಳನ್ನು ಪಾಲಿಸದ 18 ವೈದ್ಯಕೀಯ ಕಾಲೇಜುಗಳಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ(UGC) ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ದೆಹಲಿ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯ ತಲಾ ಎರಡು, ಆಂಧ್ರಪ್ರದೇಶ ಮತ್ತು ಬಿಹಾರದ ತಲಾ ಮೂರು; ಮಧ್ಯಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದ ತಲಾ ಒಂದು ಕಾಲೇಜುಗಳು ಕರ್ತವ್ಯಲೋಪ ಎಸಗಿದ್ದು, ಅವುಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

"ಈ ಕಾಲೇಜ್ ಗಳು ರ‍್ಯಾಗಿಂಗ್ ಪಿಡುಗನ್ನು ತಡೆಯಲು ರ‍್ಯಾಗಿಂಗ್ ವಿರೋಧಿ ನೀತಿ 2009ರ ಅನ್ವಯ ಅಗತ್ಯ ಕ್ರಮಗಳನ್ನು ಕೈಗೊಳ್ಳದಿರುವುದು ಕಂಡುಬಂದಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ನಿಯಮಗಳ ಪ್ರಕಾರ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್ ವಿರೋಧಿ ಮುಚ್ಚಳಿಕೆಯನ್ನುಬರೆಯಿಸಿಕೊಳ್ಳುವಲ್ಲಿ ಈ ಸಂಸ್ಥೆಗಳು ವಿಫಲವಾಗಿವೆ ಎಂಬುದು ನಮ್ಮ ಗಮನಕ್ಕೆ ಬಂದಿದೆ" ಎಂದು ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಅವರು ಹೇಳಿದ್ದಾರೆ.

ರ‍್ಯಾಗಿಂಗ್ ವಿರೋಧಿ ನೀತಿ 2009ರ ಪ್ರಕಾರ, ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಅವರ ಪೋಷಕರು, ಪ್ರವೇಶದ ಸಮಯದಲ್ಲಿ ಮತ್ತು ಪ್ರತಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ರ‍್ಯಾಗಿಂಗ್ ವಿರೋಧಿ ಮುಚ್ಚಳಿಕೆಯನ್ನು ಕಡ್ಡಾಯವಾಗಿ ಸಲ್ಲಿಸಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT