ಡಾ.ಚಂದ್ರಶೇಖರ್ ಪೆಮ್ಮಸಾನಿ 
ದೇಶ

ಪ್ರಧಾನಮಂತ್ರಿ ಅವಾಸ್ ಯೋಜನೆ (ಗ್ರಾಮೀಣ): ಇಲ್ಲಿಯವರೆಗೆ 2.69 ಕೋಟಿ ಮನೆಗಳ ನಿರ್ಮಾಣ ಪೂರ್ಣ- ಕೇಂದ್ರ ಸರ್ಕಾರ

ಮಾರ್ಚ್ 31, 2024 ರಂತೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅರ್ಹ ಫಲಾನುಭವಿಗಳಿಗೆ ಎಲ್ಲಾ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಡಾ.ಚಂದ್ರಶೇಖರ್ ಪೆಮ್ಮಸಾನಿ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

ನವದೆಹಲಿ: ಗ್ರಾಮೀಣ ಪ್ರದೇಶದಲ್ಲಿ 'ಎಲ್ಲರಿಗೂ ಸೂರು' ಒದಗಿಸುವ ಉದ್ದೇಶ ಸಾಧನೆಗಾಗಿ ಫೆಬ್ರವರಿ 2 ರವರೆಗೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆಯಾಗಿದ್ದ 3.79 ಕೋಟಿ ಮನೆಗಳ ಪೈಕಿ 3.34 ಕೋಟಿ ಮನೆಗಳು ಮಂಜೂರು ಆಗಿದ್ದು, ಇಲ್ಲಿಯವರೆಗೂ 2.69 ಕೋಟಿ ಮನೆಗಳ ನಿರ್ಮಾಣ ಸಂಪೂರ್ಣವಾಗಿದೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ.

ಗ್ರಾಮೀಣ ಅಭಿವೃದ್ಧಿ ಸಚಿವಾಲಯ ಏಪ್ರಿಲ್ 1, 2016 ರಿಂದ ಅನುಷ್ಠಾನಗೊಳಿಸಿದ ಪ್ರಧಾನಮಂತ್ರಿ ಅವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ 2.95 ಕೋಟಿ ಅರ್ಹ ಗ್ರಾಮೀಣ ವಸತಿ ರಹಿತರಿಗೆ ಆರ್ಥಿಕ ನೆರವು ಒದಗಿಸಲಾಗಿದೆ.

ಮಾರ್ಚ್ 31, 2024 ರಂತೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅರ್ಹ ಫಲಾನುಭವಿಗಳಿಗೆ ಎಲ್ಲಾ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಡಾ.ಚಂದ್ರಶೇಖರ್ ಪೆಮ್ಮಸಾನಿ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

2024-25 ರಿಂದ 2028-29 ರ ಅವಧಿಯಲ್ಲಿ ಹೆಚ್ಚುವರಿ 2 ಕೋಟಿ ಮನೆಗಳ ನಿರ್ಮಾಣಕ್ಕಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ( PMAY-G)ಅನುಷ್ಠಾನದ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

2024-25ರ ಅವಧಿಯಲ್ಲಿಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ 84,37,139 ಮನೆಗಳ ಗುರಿಯನ್ನು ಸಚಿವಾಲಯ ನಿಗದಿಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ