ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಇತರರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ಗಳ ಹಾಕಿದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರನ್ನು ಶುಕ್ರವಾರ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಪ್ರಕಾಶಂ ಜಿಲ್ಲೆಯ ಅಮರಾವತಿ ಪೊಲೀಸರ ಮುಂದೆ ರಾಮ್ ಗೋಪಾಲ್ ವರ್ಮಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷ ಆಂಧ್ರಪ್ರದೇಶದಲ್ಲಿ ವರ್ಮಾ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿದ್ದವು, ಸಿಎಂ ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಅವರ ಕುಟುಂಬ ಸದಸ್ಯರ ಮಾರ್ಫ್ ಮಾಡಿದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ "ಅಸಭ್ಯ" ರೀತಿಯಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ವರ್ಮಾ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ, ಅವರು ಒಂಗೋಲ್ ಗ್ರಾಮೀಣ ಪೊಲೀಸ್ ಠಾಣೆಯ ತನಿಖಾಧಿಕಾರಿ(ಐಒ) ಮುಂದೆ ಹಾಜರಾದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಸಿಎಂ ನಾಯ್ಡು ಮತ್ತು ಇತರರ ಬಗ್ಗೆ "ಆಕ್ಷೇಪಾರ್ಹ" ಸಾಮಾಜಿಕ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾದ ನಂತರ ವರ್ಮಾ ಅವರು ಆಂಧ್ರಪ್ರದೇಶ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.