ಚುನಾವಣಾ ಆಯೋಗ (ಸಂಗ್ರಹ ಚಿತ್ರ) online desk
ದೇಶ

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ- ರಾಹುಲ್ ಗಾಂಧಿ ಆರೋಪ; ಸಂಪೂರ್ಣ ವಾಸ್ತವ ವಿಷಯಗಳೊಂದಿಗೆ ಪ್ರತಿಕ್ರಿಯಿಸುತ್ತೇವೆ- ಚುನಾವಣಾ ಆಯೋಗ

ಸರ್ಕಾರದ ಅಂಕಿಅಂಶಗಳ ಪ್ರಕಾರ ಮಹಾರಾಷ್ಟ್ರದ ವಯಸ್ಕ ಜನಸಂಖ್ಯೆ 9.54 ಕೋಟಿಯಷ್ಟಿದ್ದರೆ, ರಾಜ್ಯದಲ್ಲಿ 9.7 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜ್ಯದ ಒಟ್ಟು ಜನಸಂಖ್ಯೆಗಿಂತ ಹೆಚ್ಚಿನ ಮತದಾರರಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ ಹಿನ್ನೆಲೆಯಲ್ಲಿ ಸಂಪೂರ್ಣ ವಾಸ್ತವಾಂಶಗಳೊಂದಿಗೆ ಲಿಖಿತವಾಗಿ ಈ ಆರೋಪಕ್ಕೆ ಪ್ರತಿಕ್ರಿಯಿಸುವುದಾಗಿ ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಆರೋಪ ಮಾಡಿದ ಕೂಡಲೇ ಚುನಾವಣಾ ಆಯೋಗ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, 'ರಾಜಕೀಯ ಪಕ್ಷಗಳನ್ನು ಆದ್ಯತೆಯ ಪಾಲುದಾರರು ಎಂದು ಇಸಿಐ ಪರಿಗಣಿಸುತ್ತದೆ. ಸಹಜವಾಗಿ ಮತದಾರರು ಕೂಡ ಪ್ರಧಾನರಾಗಿದ್ದಾರೆ ಮತ್ತು ರಾಜಕೀಯ ಪಕ್ಷಗಳಿಂದ ಬರುವ ಅಭಿಪ್ರಾಯಗಳು, ಸಲಹೆಗಳು ಮತ್ತು ಪ್ರಶ್ನೆಗಳನ್ನು ಆಯೋಗ ಗೌರವಿಸುತ್ತದೆ' ಎಂದಿದೆ.

'ದೇಶದಾದ್ಯಂತ ಏಕರೂಪವಾಗಿ ಅಳವಡಿಸಿಕೊಂಡಿರುವ ಸಂಪೂರ್ಣ ವಾಸ್ತವಿಕ ಮತ್ತು ಕಾರ್ಯವಿಧಾನ ಸಂಪೂರ್ಣ ಮಾಹಿತಿಯೊಂದಿಗೆ ಆಯೋಗವು ಲಿಖಿತವಾಗಿ ಪ್ರತಿಕ್ರಿಯಿಸುತ್ತದೆ' ಎಂದು ಅದು ರಾಹುಲ್ ಗಾಂಧಿಯನ್ನು ಹೆಸರಿಸದೆ ಅಥವಾ ಅವರ ಆರೋಪಗಳನ್ನು ಉಲ್ಲೇಖಿಸದೆ ಹೇಳಿದೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ ಮಹಾರಾಷ್ಟ್ರದ ವಯಸ್ಕ ಜನಸಂಖ್ಯೆ 9.54 ಕೋಟಿಯಷ್ಟಿದ್ದರೆ, ರಾಜ್ಯದಲ್ಲಿ 9.7 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ರಾಜ್ಯದ ಒಟ್ಟು ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ. ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 32 ಲಕ್ಷ ಮತದಾರರು ಸೇರ್ಪಡೆಯಾಗಿದ್ದರೆ, ಲೋಕಸಭೆ ಚುನಾವಣೆಯ ನಂತರ ಕೇವಲ ಐದು ತಿಂಗಳಲ್ಲಿ 39 ಲಕ್ಷ ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT