ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ಆಮ್ ಆದ್ಮಿ ಪಕ್ಷದ ಸಂಚಾಲಕ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೋಲು ಪಕ್ಷಕ್ಕೆ ಆಘಾತ ಉಂಟುಮಾಡಿದೆ.
ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಗದ್ದುಗೆ ಏರಿದ್ದ ಅತಿಶಿ ಅವರು ಕಲ್ಕಾಜಿ ಸ್ಥಾನದಿಂದ ವಿಧಾನಸಭಾ ಚುನಾವಣೆಯಲ್ಲಿ ಪ್ರಯಾಸದ ಗೆಲುವು ಕಂಡಿದ್ದಾರೆ. ಅವರು ಬಿಜೆಪಿ ನಾಯಕ ರಮೇಶ್ ಬಿಧುರಿ ವಿರುದ್ಧ 3500 ಮತಗಳ ಅಂತರದಿಂದ ಗೆದ್ದಿದ್ದಾರೆ.
ಕಲ್ಕಾಜಿ ಕ್ಷೇತ್ರದಲ್ಲಿ 11 ಸುತ್ತುಗಳ ಮತ ಎಣಿಕೆ ನಂತರ, ಎಎಪಿಯ ಅತಿಶಿ 47,363 ಮತಗಳಿಂದ ಮುನ್ನಡೆ ಕಂಡರೆ, ಬಿಜೆಪಿಯ ರಮೇಶ್ ಬಿಧುರಿ 44,627 ಮತಗಳೊಂದಿಗೆ ಎರಡನೇ ಸ್ಥಾನ ಹಾಗೂ ಕಾಂಗ್ರೆಸ್ ನ ಅಲ್ಕಾ ಲಂಬಾ 3,828 ಮತಗಳಿಂದ ಮೂರನೇ ಸ್ಥಾನಕ್ಕೆ ಜಾರಿದರು.