ಅರವಿಂದ್ ಕೇಜ್ರಿವಾಲ್ ಗೆ ಸೋಲು 
ದೇಶ

Delhi Election Results 2025: ಮಾಜಿ ಸಿಎಂ Arvind Kejriwal ಸೋಲು, AAP ತೀವ್ರ ಮುಖಭಂಗ!

2013 ರಲ್ಲಿ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕಿ ಮತ್ತು ಅಂದಿನ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನೇ ಸೋಲಿಸಿದ್ದ ಕೇಜ್ರಿವಾಲ್ ಆದೇ ಕ್ಷೇತ್ರದಲ್ಲಿ ದಶಕದ ನಂತರ ಸೋತಿದ್ದಾರೆ.

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿಗೆ ಭಾರಿ ಆಘಾತ ಎದುರಾಗಿದ್ದು ಪಕ್ಷದ ಸಂಚಾಲಕ ಹಾಗೂ ಮಾಜಿ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು ಕಂಡಿದ್ದಾರೆ.

ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋತಿದ್ದು, 3,865 ಮತಗಳ ಅಂತರದಲ್ಲಿ ಕೇಜ್ರಿವಾಲ್ ಸೋತಿದ್ದಾರೆ ಎಂದು ತಿಳಿದುಬಂದಿದೆ.

ಕೇಜ್ರಿವಾಲ್ ವಿರುದ್ದ ಸ್ಪರ್ಧಿಸಿದ್ದ ಬಿಜೆಪಿಯ ಪರ್ವೇಶ್ ವರ್ಮಾ ಈ ಮೂಲಕ ದೊಡ್ಡ ಗೆಲುವು ಸಾಧಿಸಿದ್ದು, ಇದು ಪ್ರಮುಖ ರಾಜಕೀಯ ಏರಿಳಿತವನ್ನು ಸೂಚಿಸುತ್ತದೆ.

2013 ರಲ್ಲಿ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕಿ ಮತ್ತು ಅಂದಿನ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನೇ ಸೋಲಿಸಿದ್ದ ಕೇಜ್ರಿವಾಲ್ ಆದೇ ಕ್ಷೇತ್ರದಲ್ಲಿ ದಶಕದ ನಂತರ ಸೋತಿದ್ದಾರೆ.

ಚುನಾವಣಾ ಆಯೋಗದ ಮೂಲಗಳ ಪ್ರಕಾರ ಬಿಜೆಪಿ ಅಭ್ಯರ್ಥಿ ಪರ್ವೇಶ್ ಸಿಂಗ್ 28448 ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಸಿಎಂ 24583 ಮತಗಳನ್ನು ಪಡೆದಿದ್ದಾರೆ. ಆ ಮೂಲಕ ಕೇಜ್ರಿವಾಲ್ ಒಟ್ಟು 3865 ಮತಗಳ ಅಂತರದಲ್ಲಿ ಸೋತಿದ್ದಾರೆ. ಅಂತೆಯೇ ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಂದೀಪ್ ದೀಕ್ಷಿತ್ ಕೇವಲ 4254 ಮತಗಳನ್ನು ಪಡೆದಿದ್ದು, ಅವರು ಬರೊಬ್ಬರಿ 24194 ಮತಗಳ ಅಂತರದಲ್ಲಿ ಸೋತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT