ದೆಹಲಿ ಆಪ್ ಗೆ ಹಿನ್ನಡೆ 
ದೇಶ

Delhi Election Results 2025: ಸಿಎಂ ಆತಿಶಿ, ಕೇಜ್ರಿವಾಲ್ ಸಹಿತ ಆಪ್ ಸರ್ಕಾರದ ಘಟಾನುಘಟಿಗಳಿಗೇ ಹಿನ್ನಡೆ!

ದೇಶದ ಕುತೂಹಲ ಕೆರಳಿಸಿರುವ ದೆಹಲಿಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದ್ದು, ಆರಂಭಿಕ ಹಂತಗಳಲ್ಲಿ ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತಾರೂಢ ಎಎಪಿ ತೀವ್ರ ಹಿನ್ನಡೆಯಲ್ಲಿದೆ.

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಈ ಬಾರಿ ಎಎಪಿಗೆ ಬಿಜೆಪಿ ಭಾರಿ ಆಘಾತ ನೀಡಿದ್ದು, ಸಿಎಂ ಆತಿಶಿ ಸಹಿತ ಆಪ್ ಸರ್ಕಾರದ ಘಟಾನುಘಟಿ ನಾಯಕರೇ ಹಿನ್ನಡೆಯಲ್ಲಿದ್ದಾರೆ.

ಹೌದು.. ದೇಶದ ಕುತೂಹಲ ಕೆರಳಿಸಿರುವ ದೆಹಲಿಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದ್ದು, ಆರಂಭಿಕ ಹಂತಗಳಲ್ಲಿ ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತಾರೂಢ ಎಎಪಿ ತೀವ್ರ ಹಿನ್ನಡೆಯಲ್ಲಿದೆ. 70 ಸದಸ್ಯ ಬಲದ ದೆಹಲಿ ವಿಧಾನ ಸಭೆಗೆ ಫೆ.5ರಂದು ನಡೆದ ಚುನಾವಣೆಯಲ್ಲಿ ಶೇ 60.54 ರಷ್ಟು ಮತದಾನವಾಗಿತ್ತು. ಇಂದು (ಶನಿವಾರ) ಬೆಳಿಗ್ಗೆ 8 ಗಂಟೆಯಿಂದ ರಾಷ್ಟ್ರ ರಾಜಧಾನಿಯಾದ್ಯಂತ 19 ಕೇಂದ್ರಗಳಲ್ಲಿ ಬಿಗಿ ಭದ್ರತೆಯ ನಡುವೆ ಮತ ಎಣಿಕೆ ಪ್ರಕ್ರಿಯೆ ಶುರುವಾಗಿದೆ.

ಆಪ್ ಸರ್ಕಾರದ ಘಟಾನುಘಟಿಗಳಿಗೇ ಹಿನ್ನಡೆ!

ಇನ್ನು ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ದೆಹಲಿ ಎಎಪಿ ಸರ್ಕಾರ ಘಟಾನುಘಟಿ ನಾಯಕರೇ ಹಿನ್ನಡೆ ಅನುಭವಿಸುತ್ತಿದ್ದಾರೆ. ದೆಹಲಿ ಸಿಎಂ ಆತಿಶಿ ಕಲ್ಕಾಜಿ ಕ್ಷೇತ್ರದಲ್ಲಿ ಹಿನ್ನಡೆಯಲ್ಲಿದ್ದು, ಇಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿ ಎಂದೇ ಹೇಳಲಾಗುತ್ತಿರುವ ರಮೇಶ್ ಬಿದೂರಿ ಮುನ್ನಡೆಯಲ್ಲಿದ್ದಾರೆ.

ಅಂತೆಯೇ ದೆಹಲಿ ಅಬಕಾರಿ ಹಗರಣ ಮತ್ತು ಹವಾಲಾ ಪ್ರಕರಣದಲ್ಲಿ ಜೈಲುಪಾಲಾಗಿದ್ದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ತಮ್ಮ ಜಂಗ್ಪುರ ಕ್ಷೇತ್ರದಲ್ಲಿ ಹಿನ್ನಡೆಯಲ್ಲಿದ್ದು, ಇದೇ ಮನಿಲಾಂಡರಿಂಗ್ ಪ್ರಕರಣದಲ್ಲಿ ಸುದೀರ್ಘ ಜೈಲುವಾಸಿಯಾಗಿದ್ದ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಕೂಡ ತಮ್ಮ ಶಕುರ್ ಬಸ್ತಿ ಕ್ಷೇತ್ರದಲ್ಲಿ ಹಿನ್ನಡೆಯಲ್ಲಿದ್ದಾರೆ.

ಅಂತೆಯೇ ಪ್ರತಾಪ್ ಗಡ ಕ್ಷೇತ್ರದಿಂದ ಎಎಪಿ ಪರವಾಗಿ ಸ್ಪರ್ಧಿಸಿದ್ದ ಐಎಎಸ್ ಪರೀಕ್ಷಾ ಕೋಚ್ ಅವಧ್ ಓಜಾ ಅವರು ಕೂಡ ಹಿನ್ನಡೆಯಲ್ಲಿದ್ದಾರೆ. ಉಳಿದಂತೆ ದೆಹಲಿ ಮಾಜಿ ಸಿಎಂ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆಯಲ್ಲಿದ್ದು ಅವರ ಪ್ರತಿಸ್ಪರ್ಧಿ ಬಿಜೆಪಿಯ ಪರ್ವೇಶ್ ವರ್ಮಾ ಮುನ್ನಡೆಯಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್