ಕೆಟಿ ರಾಮಾರಾವ್ ಮತ್ತು ರಾಹುಲ್ ಗಾಂಧಿ 
ದೇಶ

Delhi Election Results: ''BJP ಗೆ ಮತ್ತೊಂದು ಜಯ ತಂದುಕೊಟ್ಟಿದ್ದಕ್ಕೆ Rahul Gandhi ಗೆ ಧನ್ಯವಾದಗಳು''

'ರಾಹುಲ್ ಗಾಂಧಿ ಅವರು ತಮ್ಮನ್ನು ತಾವು ಗೆಲ್ಲಿಸಿಕೊಳ್ಳುವುದೂ ಇಲ್ಲ.. ಬೇರೆವರೂ ಗೆಲಲ್ಲು ಬಿಡುವುದಿಲ್ಲ. ತಮ್ಮ ಸ್ವಾರ್ಥದ ಮೂಲಕ ಅವರು ಇಂಡಿಯಾ ಮೈತ್ರಿಕೂಟದ ಬಲಿಷ್ಠ ಪ್ರಾದೇಶಿಕ ಪಕ್ಷಗಳನ್ನೂ ದುರ್ಬಲಗೊಳಿಸುತ್ತಿದ್ದಾರೆ'.

ಹೈದರಾಬಾದ್: ದೆಹಲಿ ವಿಧಾನಸಭೆ ಚುನಾವಣೆ ಮೂಲಕ ಬಿಜೆಪಿ ಪಕ್ಷಕ್ಕೆ ಮತ್ತೊಂದು ಗೆಲುವು ತಂದು ಕೊಟ್ಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳು ಎಂದು BRS ನಾಯಕ ಹಾಗೂ ತೆಲಂಗಾಣ ಮಾಜಿ ಸಚಿವ ಕೆಟಿ ರಾಮಾರಾವ್ ವ್ಯಂಗ್ಯ ಮಾಡಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಸೋಲಿನತ್ತ ಮುಖ ಮಾಡಿದ್ದು, ಬಿಜೆಪಿ ಭಾರಿ ಅಂತರದ ಗೆಲುವಿನತ್ತ ದಾಪುಗಾಲಿರಿಸಿದೆ. ಈ ವರೆಗಿನ ಫಲಿತಾಂಶಗಳ ಅನ್ವಯ ಒಟ್ಟು 70ಕ್ಷೇತ್ರಗಳ ಪೈಕಿ ಬಿಜೆಪಿ 43 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಎಎಪಿ 27 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದ್ದು, ತಾನು ಸ್ಪರ್ಧಿಸಿದ್ದ ಎಲ್ಲ ಕ್ಷೇತ್ರಗಳಲ್ಲೂ ಹಿನ್ನಡೆಯಲ್ಲಿದೆ. ಆ ಮೂಲಕ ಕಾಂಗ್ರೆಸ್ ಪಕ್ಷ ದೆಹಲಿಯಲ್ಲಿ ಸತತ ಮೂರನೇ ಬಾರಿಗೆ ಶೂನ್ಯ ಸಾಧನೆಯತ್ತ ದಾಪುಗಾಲಿರಿಸಿದ್ದು, ಶೂನ್ಯ ಸಾಧನೆಯಲ್ಲೂ ಹ್ಯಾಟ್ರಿಕ್ ಮಾಡಿದೆ.

ಈ ನಡುವೆ ದೆಹಲಿ ಚುನಾವಣೆಗೆ ಸಂಬಂಧಿಸಿದಂತೆ ಎಎಪಿ ಸೋಲಿಗೆ ಕಾಂಗ್ರೆಸ್ ಕಾರಣ ಎಂಬ ಟೀಕೆಗಳು ಉದ್ಭವಾಗಿದ್ದು, ಇದೇ ವಿಚಾರವಾಗಿ ಕಾಂಗ್ರೆಸ್ ವಿರುದ್ದ ಕಿಡಿಕಾರಿರುವ ಬಿಆರ್ ಎಸ್ ಪಕ್ಷದ ನಾಯಕ ಹಾಗೂ ತೆಲಂಗಾಣ ಮಾಜಿ ಸಚಿವ ಕೆಟಿ ರಾಮಾರಾವ್ ಅವರು, 'BJPಗೆ ಮತ್ತೊಂದು ಜಯ ತಂದುಕೊಟ್ಟಿದ್ದಕ್ಕೆ Rahul Gandhiಗೆ ಧನ್ಯವಾದಗಳು' ಎಂದು ಹೇಳಿದ್ದಾರೆ.

'ದೆಹಲಿ ಚುನಾವಣೆ ಮೂಲಕ ರಾಹುಲ್ ಗಾಂಧಿಗೆ ಬಿಜೆಪಿಯನ್ನು ಸೋಲಿಸುವ ಸಾಮರ್ಥ್ಯವಿಲ್ಲ ಎಂಬುದು ಮತ್ತೆ ಸಾಬೀತಾಗಿದೆ. ಅವರು ತಮ್ಮನ್ನು ತಾವು ಗೆಲ್ಲಿಸಿಕೊಳ್ಳುವುದೂ ಇಲ್ಲ.. ಬೇರೆವರೂ ಗೆಲಲ್ಲು ಬಿಡುವುದಿಲ್ಲ. ತಮ್ಮ ಸ್ವಾರ್ಥದ ಮೂಲಕ ಅವರು ಇಂಡಿಯಾ ಮೈತ್ರಿಕೂಟದ ಬಲಿಷ್ಠ ಪ್ರಾದೇಶಿಕ ಪಕ್ಷಗಳಾದ ಎಎಪಿ, ಬಿಆರ್ ಎಸ್ ನಂತಹ ಸ್ಥಳೀಯ ಪಕ್ಷಗಳನ್ನೂ ದುರ್ಬಲ ಮಾಡುತ್ತಿದ್ದಾರೆ. ಆ ಮೂಲಕ ಬಿಜೆಪಿ ಪಕ್ಷವನ್ನು ಶಕ್ತಿಶಾಲಿಗೊಳಿಸಿ ಆ ಪಕ್ಷ ಗೆಲ್ಲಲು ಪರೋಕ್ಷ ನೆರವಾಗುತ್ತಿದ್ದಾರೆ. ದೆಹಲಿ ಚುನಾವಣೆ ಮೂಲಕ ಮತ್ತೆ ಬಿಜೆಪಿಗೆ ಮತ್ತೊಂದು ಗೆಲುವು ತಂದುಕೊಟ್ಟಿದ್ದಕ್ಕಾಗಿ ರಾಹುಲ್ ಗಾಂಧಿ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಈ ಸಾಧನೆಯ ಬಗ್ಗೆ ಅವರು ತುಂಬಾ ಹೆಮ್ಮೆಪಡುತ್ತಾರೆ ಎಂದು ನನಗೆ ಖಚಿತವಾಗಿದೆ ಎಂದು ಕೆಟಿ ರಾಮಾರಾವ್ ವ್ಯಂಗ್ಯ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!