ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ಬಿಜಾಪುರದಲ್ಲಿ ಎನ್‌ಕೌಂಟರ್‌; 31 ನಕ್ಸಲರ ಹತ್ಯೆ, ಇಬ್ಬರು ಪೊಲೀಸರು ಹುತಾತ್ಮ

ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಬಿಜಾಪುರ (ಛತ್ತೀಸಗಢ): ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಡೆಸಿದ ಎನ್‌ಕೌಂಟರ್‌ನಲ್ಲಿ 31 ನಕ್ಸಲರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯೂ ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಈ ಘಟನೆಯೊಂದಿಗೆ, ಈ ವರ್ಷ ಇದುವರೆಗೆ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 81 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಬೆಳಗ್ಗೆ ವಿವಿಧ ಭದ್ರತಾ ಪಡೆಗಳು ನಡೆಸಿದ ಜಂಟಿ ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದೆ. ಎನ್‌ಕೌಂಟರ್‌ನಲ್ಲಿ ಮೂವತ್ತೊಂದು ನಕ್ಸಲರು ಹತರಾಗಿದ್ದಾರೆ ಎಂದು ಬಸ್ತಾರ್ ರೇಂಜ್‌ನ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ತಿಳಿಸಿದ್ದಾರೆ.

ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಗಾರ್ಡ್‌ಗೆ ಸೇರಿದ ಮತ್ತು ವಿಶೇಷ ಕಾರ್ಯಪಡೆಗೆ ಸೇರಿದ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಗಾಯಗೊಂಡಿರುವ ಇಬ್ಬರು ಯೋಧರು ಅಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ನೀಡಲು ಅವರನ್ನು ಉತ್ತಮ ವೈದ್ಯಕೀಯ ಸೌಲಭ್ಯಕ್ಕೆ ಏರ್ ಲಿಫ್ಟ್ ಮಾಡಲಾಗುತ್ತಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು.

ಕಳೆದ ವರ್ಷ, ಛತ್ತೀಸಗಢದಲ್ಲಿ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 219 ನಕ್ಸಲರನ್ನು ತಟಸ್ಥಗೊಳಿಸಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾತ್ರಿಯಿಡೀ ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್‌ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ

'ಅನಾಗರಿಕ, ಹೇಡಿತನದ ಕೃತ್ಯ': ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ದಾಳಿ ಖಂಡಿಸಿದ ಭಾರತ

'ನನಗೆ ನಯನಾತಾರಾ ಬೇಕು! ಈ ಕನಸು ನನಸು ಮಾಡುವಿರಾ? ವಿವಾದ ಮೈ ಮೇಲೆ ಎಳೆದುಕೊಂಡ AIADMK ನಾಯಕ!

ಹಾರ್ಮುಜ್ ಮೂಲಕ ಗುಜರಾತ್ ತಲುಪಿದ LPG ಹೊತ್ತ ಮತ್ತೊಂದು ಹಡಗು 'ನಂದಾ ದೇವಿ'

Iris Dena ನಾವಿಕರ ಹತ್ಯೆ: ಡೆಡ್ಲಿ ಪ್ರತೀಕಾರಕ್ಕಾಗಿ ಕಾಯುತ್ತಿದ್ದೇವೆ, ಯಾವಾಗ, ಏನು ಎಂಬ ಗುಟ್ಟು ಬಿಟ್ಟುಕೊಡದ ಇರಾನ್!

SCROLL FOR NEXT