ಸಾಂದರ್ಭಿಕ ಚಿತ್ರ 
ದೇಶ

Delhi polls: 67 ಕಾಂಗ್ರೆಸ್ ನಾಯಕರು ಸೇರಿದಂತೆ ಶೇ 80ರಷ್ಟು ಅಭ್ಯರ್ಥಿಗಳಿಗೆ ಠೇವಣಿ ನಷ್ಟ!

ಶನಿವಾರ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಎಎಪಿ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಾದ ಜನತಾ ದಳ (ಯುನೈಟೆಡ್) ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಪಕ್ಷದ ಎಲ್ಲ ಅಭ್ಯರ್ಥಿಗಳು ಮತಗಳನ್ನು ಪಡೆದು ಠೇವಣಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಶೇ 80ರಷ್ಟು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರು ಸೇರಿದಂತೆ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.

ಶನಿವಾರ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಎಎಪಿ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಾದ ಜನತಾ ದಳ (ಯುನೈಟೆಡ್) ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಪಕ್ಷದ ಎಲ್ಲ ಅಭ್ಯರ್ಥಿಗಳು ಮತಗಳನ್ನು ಪಡೆದು ಠೇವಣಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 699 ಅಭ್ಯರ್ಥಿಗಳ ಪೈಕಿ 555 (ಶೇ 79.39) ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.

ಸತತ ಮೂರನೇ ಅವಧಿಗೆ ಒಂದೇ ಒಂದು ಸೀಟು ಗೆಲ್ಲದ ಕಾಂಗ್ರೆಸ್‌ನ 67 ಅಭ್ಯರ್ಥಿಗಳು ತಮ್ಮ ಠೇವಣಿ ಹಣವನ್ನು ಕಳೆದುಕೊಂಡಿರುವುದು ಪಕ್ಷಕ್ಕೆ ಸಂಕಷ್ಟ ತಂದೊಡ್ಡಿದೆ. 2013ರವರೆಗೆ ಸತತ ಮೂರು ಅವಧಿಗೆ ದೆಹಲಿಯನ್ನು ಆಳಿದ ಕಾಂಗ್ರೆಸ್ ದೆಹಲಿಯ ಎಲ್ಲ 70 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

ಕಾಂಗ್ರೆಸ್‌ನ ಕಸ್ತೂರ್ಬಾ ನಗರ ಕ್ಷೇತ್ರದ ಅಭಿಷೇಕ್ ದತ್, ನಂಗ್ಲೋಯ್ ಜಾಟ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದ ರೋಹಿತ್ ಚೌಧರಿ ಮತ್ತು ಬದ್ಲಿಯಿಂದ ಕಣಕ್ಕಿಳಿದಿದ್ದ ದೇವೇಂದ್ರ ಯಾದವ್ ತಮ್ಮ ಠೇವಣಿ ಉಳಿಸಿಕೊಂಡಿದ್ದಾರೆ.

ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಎಐಎಂಐಎಂನ ಶಿಫಾ-ಉರ್-ರೆಹಮಾನ್ ಖಾನ್ ಅವರು ಓಖ್ಲಾದಲ್ಲಿ ತಮ್ಮ ಠೇವಣಿ ಉಳಿಸಿಕೊಂಡಿದ್ದಾರೆ.

ಜನತಾ ಪ್ರಾತಿನಿಧ್ಯ ಕಾಯ್ದೆ, 1951ರ ಪ್ರಕಾರ, ಚುನಾವಣೆಯಲ್ಲಿ ಸ್ಪರ್ಧಿಸುವ ಸಾಮಾನ್ಯ ವರ್ಗದ ಯಾವುದೇ ಅಭ್ಯರ್ಥಿಯು ಭದ್ರತಾ ಠೇವಣಿಯಾಗಿ ಚುನಾವಣಾ ಆಯೋಗಕ್ಕೆ 10,000 ರೂ. ಠೇವಣಿ ಇಡಬೇಕಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳು 5,000 ರೂ. ಠೇವಣಿ ಇಡಬೇಕು.

ಚುನಾವಣೆಯ ನಿಯಮಗಳ ಪ್ರಕಾರ ಚಲಾವಣೆಯಾದ ಒಟ್ಟು ಮತಗಳಲ್ಲಿ 6ನೇ ಒಂದು ಭಾಗದಷ್ಟು ಮತ ಪಡೆಯಲು ಸಾಧ್ಯವಾಗದೇ ಇದ್ದರೆ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ.

70 ವಿಧಾನಸಭಾ ಕ್ಷೇತ್ರಗಳಿರುವ ದೆಹಲಿಯಲ್ಲಿ 48 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಬರೋಬ್ಬರಿ 26 ವರ್ಷಗಳ ನಂತರ ಅಧಿಕಾರಕ್ಕೆ ಮರಳಿದೆ. ಇನ್ನುಳಿದಂತೆ ಎಎಪಿ 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT