ಎಎಪಿ ನಾಯಕಿ ಅತಿಶಿ ಭಾನುವಾರ ದೆಹಲಿಯ ರಾಜ್ ನಿವಾಸದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. 
ದೇಶ

ದೆಹಲಿ ಚುನಾವಣೆ: ಬಿಜೆಪಿಗೆ ಭರ್ಜರಿ ಗೆಲುವು; ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ರಾಜೀನಾಮೆ

ಫೆಬ್ರುವರಿ 5 ರಂದು ನಡೆದ ಚುನಾವಣೆಯಲ್ಲಿ ಎಎಪಿ 22 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಶೂನ್ಯಕ್ಕೆ ತೃಪ್ತಿಪಟ್ಟುಕೊಂಡಿದೆ.

ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಹೀನಾಯ ಸೋಲನುಭವಿಸಿದ ಒಂದು ದಿನದ ನಂತರ ದೆಹಲಿ ಮುಖ್ಯಮಂತ್ರಿ ಅತಿಶಿ ಭಾನುವಾರ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ರಾಜೀನಾಮೆ ನೀಡಿದ್ದಾರೆ.

ಕಲ್ಕಾಜಿ ಸ್ಥಾನದಲ್ಲಿ ಗೆಲುವು ಸಾಧಿಸಿರುವ ಅತಿಶಿ ಅವರು, ರಾಜ್ ನಿವಾಸದಲ್ಲಿ ಸಕ್ಸೇನಾ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬರೋಬ್ಬರಿ 26 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳಿದೆ. 70 ವಿಧಾನಸಭಾ ಕ್ಷೇತ್ರಗಳ ಪೈಕಿ 48 ಕ್ಷೇತ್ರಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ.

ಫೆಬ್ರುವರಿ 5 ರಂದು ನಡೆದ ಚುನಾವಣೆಯಲ್ಲಿ ಎಎಪಿ 22 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಶೂನ್ಯಕ್ಕೆ ತೃಪ್ತಿಪಟ್ಟುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಮುಗಿಸಿ ವಾಪಸ್ಸಾದ ನಂತರ ಮುಂದಿನ ವಾರ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವ ನಿರೀಕ್ಷೆಯಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಕೇಳಿಬಂದ ಭ್ರಷ್ಟಾಚಾರ ಆರೋಪಗಳ ನಡುವೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ ಅತಿಶಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್