ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದ ಬಿರೇನ್ ಸಿಂಗ್(ಸಂಗ್ರಹ ಚಿತ್ರ) 
ದೇಶ

ನಾಯಕತ್ವ ಬಿಕ್ಕಟ್ಟಿನ ನಡುವೆ ಬಿಜೆಪಿ ನಿಯೋಗದಿಂದ ಮಣಿಪುರ ರಾಜ್ಯಪಾಲರ ಭೇಟಿ

ಇಂದು ಸಂಜೆ ಇಂಫಾಲ್‌ನ ರಾಜಭವನಕ್ಕೆ ತೆರಳಿದ ಬಿಜೆಪಿ ಈಶಾನ್ಯ ಉಸ್ತುವಾರಿ ಸಂಬಿತ್ ಪಾತ್ರ ಮತ್ತು ಪಕ್ಷದ ರಾಜ್ಯಾಧ್ಯಕ್ಷೆ ಎ ಶಾರದಾ ದೇವಿ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತು.

ಇಂಫಾಲ್: ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ನಾಯಕತ್ವ ಬಿಕ್ಕಟ್ಟಿನ ನಡುವೆಯೇ, ಭಾರತೀಯ ಜನತಾ ಪಕ್ಷದ ನಿಯೋಗ ಮಂಗಳವಾರ ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿ ಮಾಡಿದೆ.

ಇಂದು ಸಂಜೆ ಇಂಫಾಲ್‌ನ ರಾಜಭವನಕ್ಕೆ ತೆರಳಿದ ಬಿಜೆಪಿ ಈಶಾನ್ಯ ಉಸ್ತುವಾರಿ ಸಂಬಿತ್ ಪಾತ್ರ ಮತ್ತು ಪಕ್ಷದ ರಾಜ್ಯಾಧ್ಯಕ್ಷೆ ಎ ಶಾರದಾ ದೇವಿ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತು.

ಬಿಜೆಪಿ ನಾಯಕರು ರಾಜ್ಯಪಾಲರೊಂದಿಗೆ ಸುಮಾರು ಅರ್ಧ ಘಂಟೆಯವರೆಗೆ ಸಭೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಆದರೆ ಮಾತುಕತೆಯ ವಿವರ ಇನ್ನೂ ತಿಳಿದುಬಂದಿಲ್ಲ.

ರಾಜ್ಯ ಬಿಜೆಪಿಯಲ್ಲಿ ಹೆಚ್ಚುತ್ತಿರುವ ಅಸಮಾಧಾನ ಮತ್ತು ನಾಯಕತ್ವದ ಬದಲಾವಣೆಯ ಒತ್ತಡದ ನಡುವೆ, ಬಿರೇನ್ ಸಿಂಗ್ ಅವರು ಕಳೆದ ಭಾನುವಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಇದುವರೆಗೂ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿಲ್ಲ.

ಈಶಾನ್ಯ ರಾಜ್ಯ ಮೇ 2023 ರಿಂದ ಜನಾಂಗೀಯ ಹಿಂಸಾಚಾರದಿಂದ ನರಳುತ್ತಿದೆ. ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ