ರೇಖಾ ಗುಪ್ತಾ 
ದೇಶ

ದೆಹಲಿ ಗದ್ದುಗೆಗೆ ಮತ್ತೆ ಮಹಿಳಾ ಮುಖ್ಯಮಂತ್ರಿ?: CM ಹುದ್ದೆಗೆ ರೇಖಾ ಗುಪ್ತಾ ನೇಮಿಸಲು ಬಿಜೆಪಿ ಒಲವು!

ರಾಜಕೀಯದಲ್ಲಿ ಮಹತ್ವ ಪಡೆದಿರುವ ಲಿಂಗ ಮತ್ತು ಜಾತಿಯಂತಹ ವಿವಿಧ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಸಮತೋಲಿತ ಅಭ್ಯರ್ಥಿ ನೇಮಕಕ್ಕಾಗಿ ಪಕ್ಷವು ಪ್ರಯತ್ನಿಸುತ್ತಿದೆ.

ದೆಹಲಿ: ದೆಹಲಿ ವಿಧಾನಸಭಾ ಚನಾವಣೆಯಲ್ಲಿ ಬಿಜೆಪಿ ಗೆಲುವಿನತ್ತ ದಾಪುಗಾಲಿಟ್ಟಿದ್ದು, 27 ವರ್ಷಗಳ ಬಳಿಕ ಅಧಿಕಾರದ ಗದ್ದುಗೆ ಹಿಡಿಯಲು ಸಜ್ಜಾಗುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಬಗ್ಗೆ ಚರ್ಚೆ ಜೋರಾಗಿದೆ.

ರಾಜಕೀಯದಲ್ಲಿ ಮಹತ್ವ ಪಡೆದಿರುವ ಲಿಂಗ ಮತ್ತು ಜಾತಿಯಂತಹ ವಿವಿಧ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಸಮತೋಲಿತ ಅಭ್ಯರ್ಥಿ ನೇಮಕಕ್ಕಾಗಿ ಪಕ್ಷವು ಪ್ರಯತ್ನಿಸುತ್ತಿದೆ. ಆಯ್ಕೆಯಾಗಿರುವ 48 ಶಾಸಕರ ಪೈಕಿ ಒಬ್ಬರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ನೇಮಿಸಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಮಹಿಳೆ ಅಥವಾ ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಯು ಬಿಜೆಪಿ ಕೇಂದ್ರ ನಾಯಕತ್ವದ ಆಯ್ಕೆಯಾಗಲಿದೆ ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ.

ವಿದ್ಯಾರ್ಥಿ ಜೀವನದಿಂದಲೇ ರಾಜಕೀಯದಲ್ಲಿ ಗುರುತಿಸಿಕೊಂಡಿರುವ ರೇಖಾ ಗುಪ್ತಾ ಅವರು ಪ್ರಬಲ ಸ್ಪರ್ಧಿಯಾಗಿ ಕಾಣುತ್ತಾರೆ. ಅವರ ವೈಶ್ಯ ಸಮುದಾಯದ ಹಿನ್ನೆಲೆ ಮತ್ತು ಡಿಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಅನುಭವವು ಅವರಿಗೆ ಸಹಾಯ ಮಾಡಬಹುದು ಎಂದು ಹೇಳಲಾಗುತ್ತಿದೆ. ಜಾತಿವಾರು, ಮಹಿಳೆ, ಪ್ರಾದೇಶಿಕ ಸಮತೋಲನ ಕಾಯ್ದುಕೊಳ್ಳಲು ಮುಖ್ಯಮಂತ್ರಿ ಜತೆಗೆ ಒಂದು ಅಥವಾ ಎರಡು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಸಾಧ್ಯತೆಗಳಿವೆ.

ಬಿಜೆಪಿ ಹೈಕಮಾಂಡ್‌ ಹಿಂದೆ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಅಚ್ಚರಿಯ ಅಭ್ಯರ್ಥಿಯನ್ನು ಮುಖ್ಯಮಂತ್ರಿಯಾಗಿಸಿದ ನಿದರ್ಶನಗಳಿವೆ. ಹೀಗಾಗಿ ಈ ಬಾರಿ ದೆಹಲಿಯಲ್ಲಿಯೂ ಹೊಸ ಮುಖಕ್ಕೆ ಮಣೆಹಾಕಿದರೂ ಅಚ್ಚರಿಯಿಲ್ಲ.

ಆದರೆ, ರಾಜ್ ಕುಮಾರ್ ಚೌಹಾಣ್ ಅವರಂತಹ ಎಸ್‌ಸಿ ಅಭ್ಯರ್ಥಿಗಳ ಉಲ್ಲೇಖವು ಮತ್ತೊಂದು ಸಮೀಕರಣವಾಗಿದೆ , ಏಕೆಂದರೆ ಬಿಜೆಪಿ ಪ್ರಬಲ ಸಮುದಾಯದ ಯಾರನ್ನಾದರೂ ಆಯ್ಕೆ ಮಾಡಬಹುದು.

ದೆಹಲಿ ಬಿಜೆಪಿ ಸಂಭಾವ್ಯ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಚರ್ಚಿಸಲು ಪ್ರಮುಖ ಸಭೆಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಮೊದಲನೆಯದು ಜಾಟ್ ಸಮುದಾಯದಿಂದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು. ಇದು ದೆಹಲಿ ಮತ್ತು ಅದರ ನೆರೆಯ ರಾಜ್ಯಗಳಾದ ಹರಿಯಾಣ ಮತ್ತು ಪಂಜಾಬ್‌ನಲ್ಲಿ ಗಮನಾರ್ಹ ಜನಸಂಖ್ಯೆ ತಲುಪುಲು ಸಹಾಯವಾಗುತ್ತದೆ.

ಎರಡನೇ ಆಯ್ಕೆಯೆಂದರೆ, ಪರಿಶಿಷ್ಟ ಸಮುದಾಯದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು. ಏಕೆಂದರೆ ಅದು ಬಿಹಾರದ ಮತದಾರರನ್ನು ಓಲೈಸುವ ಸಾಧ್ಯತೆಯಿದೆ, ಜೊತೆಗೆ ಆ ರಾಜ್ಯದಲ್ಲಿ ಮುಂಬರುವ ಚುನಾವಣೆಗಳಿಗೆ ನೆರವಾಗುತ್ತದೆ ಎಂಬ ಲೆಕ್ಕಚಾರವಾಗಿದೆ.

ಮೂರನೇ ಆಯ್ಕೆ ಮಹಿಳಾ ಅಭ್ಯರ್ಥಿ. “ಇದು ಪ್ರಧಾನಮಂತ್ರಿಯ “ಮಹಿಳಾ ನೇತೃತ್ವದ ಅಭಿವೃದ್ಧಿ” ನಿರೂಪಣೆಗೆ ಅನುಗುಣವಾಗಿ ಕಾರ್ಯತಂತ್ರದ ಕ್ರಮವಾಗಿರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT