ರಣವೀರ್ ಅಲ್ಲಾಹಬಾದಿಯಾ online desk
ದೇಶ

ಲೈಂಗಿಕತೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: 'ಇಂಡಿಯಾಸ್ ಗಾಟ್ ಲೇಟೆಂಟ್' ಸಂಚಿಕೆಗೆ ಸರ್ಕಾರ ನಿರ್ಬಂಧ

"ರಣವೀರ್ ಅಲ್ಲಾಹಬಾದಿಯಾ ಅವರ ಅಶ್ಲೀಲ ಮತ್ತು ವಿಕೃತ ಕಾಮೆಂಟ್‌ಗಳನ್ನು ಹೊಂದಿರುವ 'ಇಂಡಿಯಾಸ್ ಗಾಟ್ ಲ್ಯಾಟೆಂಟ್' YouTube ಸಂಚಿಕೆಯನ್ನು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ನಿರ್ಬಂಧಿಸಲಾಗಿದೆ".

ನವದೆಹಲಿ: ಪೋಷಕರ ಲೈಂಗಿಕತೆ ಕುರಿತು ರಣವೀರ್ ಅಲ್ಲಾಹಬಾದಿಯಾ ಅವರ ಅಶ್ಲೀಲ ಮತ್ತು ಅಸಭ್ಯ ಕಾಮೆಂಟ್‌ಗಳನ್ನು ಒಳಗೊಂಡ 'ಇಂಡಿಯಾಸ್ ಗಾಟ್ ಲ್ಯಾಟೆಂಟ್' ಕಾರ್ಯಕ್ರಮದ ಯೂಟ್ಯೂಬ್ ಸಂಚಿಕೆಯನ್ನು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

"ರಣವೀರ್ ಅಲ್ಲಾಹಬಾದಿಯಾ ಅವರ ಅಶ್ಲೀಲ ಮತ್ತು ವಿಕೃತ ಕಾಮೆಂಟ್‌ಗಳನ್ನು ಹೊಂದಿರುವ 'ಇಂಡಿಯಾಸ್ ಗಾಟ್ ಲ್ಯಾಟೆಂಟ್' YouTube ಸಂಚಿಕೆಯನ್ನು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ನಿರ್ಬಂಧಿಸಲಾಗಿದೆ" ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ ಅವರು X ನಲ್ಲಿ ಪೋಸ್ಟ್‌ನಲ್ಲಿ ಮಾಡಿದ್ದಾರೆ.

ಹಾಸ್ಯನಟ ಸಮಯ್ ರೈನಾ ಅವರ ಯೂಟ್ಯೂಬ್ ರಿಯಾಲಿಟಿ ಶೋ 'ಇಂಡಿಯಾಸ್ ಗಾಟ್ ಲ್ಯಾಟೆಂಟ್' ನಲ್ಲಿ ರಣವೀರ್ ಅಲ್ಲಾಹಬಾದಿಯಾ ಅವರು ಪೋಷಕರು ಮತ್ತು ಲೈಂಗಿಕತೆಯ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು ಮತ್ತು ತೀವ್ರ ಟೀಕಿಗೆ ಗುರಿಯಾಗಿತ್ತು.

ಬೀರ್‌ಬೈಸೆಪ್ಸ್ ಎಂದು ಜನಪ್ರಿಯವಾಗಿರುವ ಯೂಟ್ಯೂಬರ್ ರಣವೀರ್ ಅಲ್ಲಾಹಬಾದಿಯಾ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ವಿವಾದಾತ್ಮಕ ಭಾಗವನ್ನು ತೆಗೆದುಹಾಕುವಂತೆ ಕಾರ್ಯಕ್ರಮದ ನಿರ್ಮಾಪಕರಿಗೆ ಕೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್