ಮಹಾಕುಂಭ ಮೇಳದಲ್ಲಿ ಭಕ್ತರಿಂದ ಸಂಗಮದಲ್ಲಿ ಪವಿತ್ರ ಸ್ನಾನ 
ದೇಶ

ಮಹಾಕುಂಭ ಮೇಳ: 29 ದಿನಗಳಲ್ಲಿ ಸಂಗಮದಲ್ಲಿ 45 ಕೋಟಿಗೂ ಹೆಚ್ಚು ಜನರಿಂದ ಪವಿತ್ರ ಸ್ನಾನ

ಮಹಾಕುಂಭ ಮೇಳವು ಫೆಬ್ರುವರಿ 26 ರಂದು ಮಹಾಶಿವರಾತ್ರಿಯ ಸಂದರ್ಭದಲ್ಲಿ ಕೊನೆಯ ಪ್ರಮುಖ ಪವಿತ್ರ 'ಸ್ನಾನ'ದೊಂದಿಗೆ ಕೊನೆಗೊಳ್ಳಲಿದೆ.

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಅಂತ್ಯಗೊಳ್ಳಲು ಕೇವಲ 15 ದಿನಗಳು ಬಾಕಿ ಉಳಿದಿದ್ದು, ಜನವರಿ 13 ರಂದು ಕಾರ್ಯಕ್ರಮ ಪ್ರಾರಂಭವಾದಾಗಿನಿಂದ 45 ಕೋಟಿಗೂ ಹೆಚ್ಚು ಜನರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಮಂಗಳವಾರ ತಿಳಿಸಿದೆ.

ಮಹಾಕುಂಭ ಮೇಳವು ಫೆಬ್ರುವರಿ 26 ರಂದು ಮಹಾಶಿವರಾತ್ರಿಯ ಸಂದರ್ಭದಲ್ಲಿ ಕೊನೆಯ ಪ್ರಮುಖ ಪವಿತ್ರ 'ಸ್ನಾನ'ದೊಂದಿಗೆ ಕೊನೆಗೊಳ್ಳಲಿದೆ.

ಮಹಾಕುಂಭ ಮೇಳದ ಅಂತ್ಯದ ವೇಳೆಗೆ ಸುಮಾರು 55 ಕೋಟಿ ಜನರು ಪ್ರಯಾಗ್‌ರಾಜ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ. ಮಕರ ಸಂಕ್ರಾಂತಿ, ಮೌನಿ ಅಮಾವಾಸ್ಯೆ ಮತ್ತು ಬಸಂತ್ ಪಂಚಮಿಯಂದು ಮೂರು ಮಹತ್ವದ ಅಮೃತ ಸ್ನಾನದ ನಂತರವೂ, ಪವಿತ್ರ ನಗರಕ್ಕೆ ಆಗಮಿಸುವ ಯಾತ್ರಾರ್ಥಿಗಳ ಸಂಖ್ಯೆ ಹೆಚ್ಚಿದೆ ಎಂದು ರಾಜ್ಯ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಮಂಗಳವಾರ ಬೆಳಗ್ಗೆ 10 ಗಂಟೆ ವೇಳೆಗೆ 74.96 ಲಕ್ಷ ಜನರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

ಹೇಳಿಕೆಯ ಪ್ರಕಾರ, ಮೌನಿ ಅಮಾವಾಸ್ಯೆಯಂದು ಪ್ರಯಾಗರಾಜ್‌ಗೆ ಬರೋಬ್ಬರಿ 8 ಕೋಟಿ ಜನರು ಭೇಟಿ ನೀಡಿದ್ದು, ಅವರೆಲ್ಲರೂ ಪವಿತ್ರ ಸ್ನಾನ ಮಾಡಿದ್ದಾರೆ. ಅಲ್ಲದೆ, ಮಕರ ಸಂಕ್ರಾಂತಿಯಂದು 3.5 ಕೋಟಿ ಜನರು ಮತ್ತು ಬಸಂತ್ ಪಂಚಮಿಯಂದು 2.57 ಕೋಟಿ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

ಇದರೊಂದಿಗೆ ಬಾಲಿವುಡ್ ನಟರಾದ ಅನುಪಮ್ ಖೇರ್, ಒಲಿಂಪಿಕ್ ಪದಕ ವಿಜೇತೆ ಸೈನಾ ನೆಹ್ವಾಲ್, ಕ್ರಿಕೆಟಿಗ ಸುರೇಶ್ ರೈನಾ ಮತ್ತು ಕುಸ್ತಿಪಟು ಖಲಿ ಸೇರಿದಂತೆ ಪ್ರಮುಖರು ಮಹಾಕುಂಭದಲ್ಲಿ ಭಾಗವಹಿಸಿದ್ದರು ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT