ಸಮಯ್ ರೈನಾ ಜೊತೆಗೆ ರಣವೀರ್ ಅಲ್ಲಾಬಾಡಿಯಾ 
ದೇಶ

ಅಶ್ಲೀಲ ಹೇಳಿಕೆ ವಿವಾದ: ರಣವೀರ್ ಅಲ್ಲಾಬಾಡಿಯಾ, ಸಮಯ್ ರೈನಾ ಮತ್ತಿತರ 28 ಜನರ ವಿರುದ್ಧ FIR ದಾಖಲು

ಅಲ್ಲಾಬಾಡಿಯಾ ಅವರ ಆಕ್ಷೇಪಾರ್ಹ ಹೇಳಿಕೆಗಳು ವಿವಾದಕ್ಕೆ ಕಾರಣವಾದ ನಂತರ ಸೈಬರ್ ಸೆಲ್ ಎಫ್ಐಆರ್ ದಾಖಲಿಸಿದೆ. ಹಾಸ್ಯ ಕಾರ್ಯಕ್ರಮದ ಎಲ್ಲಾ 18 ಸಂಚಿಕೆಗಳನ್ನು ತೆಗೆದುಹಾಕಲು ಒತ್ತಾಯಿಸಿದೆ.

ಮುಂಬೈ: ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಅಶ್ಲೀಲ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಮಹಾರಾಷ್ಟ್ರ ಸೈಬರ್ ಇಲಾಖೆಯು ಯೂಟ್ಯೂಬ್ ಶೋ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ವಿರುದ್ಧ ಪ್ರಕರಣ ದಾಖಲಿಸಿದೆ. ಶೋನ ಮೊದಲ ಸಂಚಿಕೆಯಿಂದ ಭಾಗಿಯಾಗಿದ್ದ ಸುಮಾರು 30 ಜನರಿಗೆ ಸಮನ್ಸ್ ಕಳುಹಿಸಲಾಗುತ್ತಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಅಲ್ಲಾಬಾಡಿಯಾ ಅವರ ಆಕ್ಷೇಪಾರ್ಹ ಹೇಳಿಕೆಗಳು ವಿವಾದಕ್ಕೆ ಕಾರಣವಾದ ನಂತರ ಸೈಬರ್ ಸೆಲ್ ಎಫ್ಐಆರ್ ದಾಖಲಿಸಿದೆ. ಹಾಸ್ಯ ಕಾರ್ಯಕ್ರಮದ ಎಲ್ಲಾ 18 ಸಂಚಿಕೆಗಳನ್ನು ತೆಗೆದುಹಾಕಲು ಒತ್ತಾಯಿಸಿದೆ.

ನ್ಯಾಯಾಧೀಶರು ಮತ್ತು ಅತಿಥಿಗಳು ಸೇರಿದಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಹಲವು ಮಂದಿ "ಅಶ್ಲೀಲ ಮತ್ತು ಅವಹೇಳನಕಾರಿ ಭಾಷೆ ಬಳಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.ಪರಿಣಾಮವಾಗಿ ಈ ವ್ಯಕ್ತಿಗಳನ್ನು ಹೆಚ್ಚಿನ ಪರಿಶೀಲನೆಗಾಗಿ ಪಟ್ಟಿ ಮಾಡಲಾಗಿದೆ.

ಅಲ್ಲಾಬಾಡಿಯಾ ಹೇಳಿಕೆ ನಂತರ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮುಂಬೈನಲ್ಲಿ ಹಲವಾರು ದೂರುಗಳನ್ನು ದಾಖಲಿಸಲಾಗಿದೆ. ಜೊತೆಗೆ ನಿಂದನೀಯ ಭಾಷೆಯ ಬಳಕೆ ಆರೋಪದ ಮೇಲೆ ಅಪೂರ್ವ ಮುಖಿಜಾ ಮತ್ತು ಹಾಸ್ಯನಟ ಸಮಯ್ ರೈನಾ ಸೇರಿದಂತೆ ಶೋಗೆ ಸಂಬಂಧಿಸಿದ ಹಲವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

ರಾಷ್ಟ್ರೀಯ ಮಹಿಳಾ ಆಯೋಗ (NCW) ಪಾಡ್‌ಕ್ಯಾಸ್ಟರ್, ಹಾಸ್ಯನಟ ಸಮಯ್ ರೈನಾ ಮತ್ತಿತರರಿಗೆ ಸಮನ್ಸ್ ಜಾರಿ ಮಾಡಿದೆ. ವಿವಾದಾತ್ಮಕ ವಿಷಯದ ಕುರಿತು NCW ಯಿಂದ ವರದಿ ಕೇಳಿರುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಹೇಳಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT