ಸಜ್ಜನ್ ಕುಮಾರ್ 
ದೇಶ

ಸಿಖ್ ವಿರೋಧಿ ದಂಗೆ ಪ್ರಕರಣ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಇಂದು ತೀರ್ಪು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 18ಕ್ಕೆ ಕಾಯ್ದಿರಿಸಿದ್ದಾರೆ.

ನವದೆಹಲಿ: 1984 ರ ಸಿಖ್ ವಿರೋಧಿ ದಂಗೆ ವೇಳೆ ಸರಸ್ವತಿ ವಿಹಾರ್ ಪ್ರದೇಶದಲ್ಲಿ ನಡೆದ ಇಬ್ಬರು ವ್ಯಕ್ತಿಗಳ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಬುಧವಾರ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಇಂದು ತೀರ್ಪು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 18ಕ್ಕೆ ಕಾಯ್ದಿರಿಸಿದ್ದಾರೆ.

ತೀರ್ಪು ಪ್ರಕಟಿಸುವ ಮುನ್ನ79 ವರ್ಷದ ಸಜ್ಜನ್ ಕುಮಾರ್ ಅವರನ್ನು ತಿಹಾರ್ ಜೈಲಿನಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ನವೆಂಬರ್ 1, 1984 ರಂದು ಜಸ್ವಂತ್ ಸಿಂಗ್ ಮತ್ತು ಅವರ ಮಗ ತರುಣ್‌ದೀಪ್ ಸಿಂಗ್ ಅವರ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

ಈ ಜೋಡಿ ಕೊಲೆ ಸಂಬಂಧ ಪಂಜಾಬಿ ಬಾಗ್ ಪೊಲೀಸ್ ಠಾಣೆ ಆರಂಭದಲ್ಲಿ ಪ್ರಕರಣವನ್ನು ದಾಖಲಿಸಿದ್ದರೂ, ನಂತರ ವಿಶೇಷ ತನಿಖಾ ತಂಡ ತನಿಖೆಯ ಜವಾಬ್ದಾರಿ ವಹಿಸಿಕೊಂಡಿತ್ತು.

ದೂರುದಾರ ಜಸ್ವಂತ್ ಅವರ ಪತ್ನಿಯ ಮನೆಯ ಮೇಲೆ ದಾಳಿ ಮಾಡಿದ ಗುಂಪೊಂದು, ಆಕೆಯ ಪತಿ ಮತ್ತು ಮಗನನ್ನು ಕೊಂದು, ವಸ್ತುಗಳನ್ನು ಲೂಟಿ ಮಾಡುವುದರ ಜೊತೆಗೆ ಅವರ ಮನೆಗೆ ಬೆಂಕಿ ಹಚ್ಚಿತು ಎಂದು ಪ್ರಾಸಿಕ್ಯೂಷನ್ ಆರೋಪಿಸಿದೆ.

ಸಜ್ಜನ್ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿದ ನ್ಯಾಯಾಲಯದ ಆದೇಶವು "ಅವರು ಕೇವಲ ಈ ಕೃತ್ಯದಲ್ಲಿ ಭಾಗವಹಿಸಿದ್ದು ಮಾತ್ರವಲ್ಲ, ಗುಂಪಿನ ನೇತೃತ್ವ ವಹಿಸಿದ್ದರು ಎಂಬ ಪ್ರಾಥಮಿಕ ಅಭಿಪ್ರಾಯ"ವನ್ನು ರೂಪಿಸಲು ಸಾಕಷ್ಟು ಪುರಾವೆಗಳನ್ನು ಸಾಕ್ಷೀಕರಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ