ರಾಜ್ಯಸಭೆಯಲ್ಲಿ ಕೇಂದ್ರ ಕಾರ್ಮಿಕ ಸಚಿವ ಡಾ.ಮನ್ಸುಖ್ ಮಾಂಡವೀಯಾ 
ದೇಶ

ದೇಶದ 92 ಕೋಟಿ ಜನರಿಗೆ ಸಾಮಾಜಿಕ ಭದ್ರತಾ ಸೌಲಭ್ಯ: ಕೇಂದ್ರ ಸರ್ಕಾರ

ರಾಜ್ಯಸಭೆಯಲ್ಲಿ ಈ ವಿಷಯ ತಿಳಿಸಿದ ಸಚಿವರು, ದಶಕದ ಹಿಂದೆ ಪಿಂಚಣಿ ಪಡೆಯುತ್ತಿದ್ದ ಶೇ. 18 ರಷ್ಟು ಜನರಿಗೆ ಸಾಮಾಜಿಕ ಭದ್ರತೆ ಒದಗಿಸಲಾಗುತಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶೇ. 48 ರಷ್ಟು ಜನರಿಗೆ ಸಾಮಾಜಿಕ ಭದ್ರತೆ ಒದಗಿಸಿದೆ.

ನವದೆಹಲಿ: ದೇಶದ ಜನಸಂಖ್ಯೆಯ ಶೇ. 65ರಷ್ಟು ಅಂದರೆ 92 ಕೋಟಿ ಜನರಿಗೆ ಸಾಮಾಜಿಕ ಭದ್ರತೆಯನ್ನು ಸರ್ಕಾರ ಕಲ್ಪಿಸಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯಾ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಈ ವಿಷಯ ತಿಳಿಸಿದ ಸಚಿವರು, ದಶಕದ ಹಿಂದೆ ಪಿಂಚಣಿ ಪಡೆಯುತ್ತಿದ್ದ ಶೇ. 18 ರಷ್ಟು ಜನರಿಗೆ ಸಾಮಾಜಿಕ ಭದ್ರತೆ ಒದಗಿಸಲಾಗುತಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶೇ. 48 ರಷ್ಟು ಜನರಿಗೆ ಸಾಮಾಜಿಕ ಭದ್ರತೆ ಒದಗಿಸಿದೆ ಎಂದರು.

"ಇದು ರಾಜ್ಯಗಳ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳನ್ನು ಹೊರತುಪಡಿಸಿದೆ. ಇದರಲ್ಲಿ ಆಹಾರ ಭದ್ರತೆಯನ್ನು ಸೇರಿಸಿದರೆ ಶೇ. 65 ರಷ್ಟು ಜನರು ಸಾಮಾಜಿಕ ಭದ್ರತೆಯನ್ನು ಪಡೆಯುತ್ತಿದ್ದಾರೆ. ಭಾರತವು ದೇಶದ 92 ಕೋಟಿ ಜನರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುತ್ತಿದೆ" ಎಂದು ಅವರು ಹೇಳಿದರು.

ಸರ್ಕಾರ 80 ಕೋಟಿ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಸುಮಾರು 60 ಕೋಟಿ ಜನರಿಗೆ 5 ಲಕ್ಷ ರೂ. ಆರೋಗ್ಯ ವಿಮೆ ನೀಡಲಾಗುತ್ತಿದೆ. 70 ವರ್ಷ ಮೇಲ್ಪಟ್ಟವರು ಮತ್ತು ಗಿಗ್ ವರ್ಕರ್‌ಗಳನ್ನು ಸಹ ಆಯುಷ್ಮಾನ್ ಭಾರತ್ ಯೋಜನೆಯಡಿ ತರಲಾಗಿದೆ. ಈ ಯೋಜನೆಯಡಿ ಸುಮಾರು 65 ಕೋಟಿ ಜನರು ಆರೋಗ್ಯ ಭದ್ರತೆಯನ್ನು ಪಡೆಯುತ್ತಿದ್ದಾರೆ.

ಸರ್ಕಾರವು ವಿಧವಾ, ಪಿಂಚಣಿ ಯೋಜನೆ ಮತ್ತು ವೃದ್ಧಾಪ್ಯ ವೇತನ ಯೋಜನೆಗಳನ್ನು ಸಹ ನಡೆಸುತ್ತಿದೆ. ಇಂದು 92 ಕೋಟಿ ಜನರು ಅಥವಾ ದೇಶದ ಜನಸಂಖ್ಯೆಯ ಶೇ. 65 ರಷ್ಟು ಜನರು ಒಂದಕ್ಕಿಂತ ಹೆಚ್ಚು ಸಾಮಾಜಿಕ ಭದ್ರತೆಯ ಯೋಜನೆಯ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.

ಸರ್ಕಾರ 80 ಕೋಟಿ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಸುಮಾರು 60 ಕೋಟಿ ಜನರಿಗೆ 5 ಲಕ್ಷ ರೂ. ಆರೋಗ್ಯ ವಿಮೆ ನೀಡಲಾಗುತ್ತಿದೆ. 70 ವರ್ಷ ಮೇಲ್ಪಟ್ಟವರು ಮತ್ತು ಗಿಗ್ ವರ್ಕರ್‌ಗಳನ್ನು ಸಹ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ತರಲಾಗುತ್ತದೆ. ಈ ಯೋಜನೆಯಡಿ ಸುಮಾರು 65 ಕೋಟಿ ಜನರು ಆರೋಗ್ಯ ಭದ್ರತೆಯನ್ನು ಪಡೆಯುತ್ತಿದ್ದಾರೆ. ಸರ್ಕಾರವು ವಿಧವಾ, ಪಿಂಚಣಿ ಯೋಜನೆ ಮತ್ತು ವೃದ್ಧಾಪ್ಯ ವೇತನ ಯೋಜನೆಗಳನ್ನು ಸಹ ನಡೆಸುತ್ತಿದೆ. ಇಂದು 92 ಕೋಟಿ ಜನರು ಅಥವಾ ದೇಶದ ಜನಸಂಖ್ಯೆಯ ಶೇ. 65 ರಷ್ಟು ಜನರು ಒಂದಕ್ಕಿಂತ ಹೆಚ್ಚು ಸಾಮಾಜಿಕ ಭದ್ರತೆಯ ಯೋಜನೆಯ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮಧ್ಯಪ್ರಾಚ್ಯ ಸಂಘರ್ಷ: ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ': Donald Trump

ರಾಜ್ಯ ಬಜೆಟ್ 2026-27: ಮದ್ಯ ತೆರಿಗೆಯಿಂದ ರಾಜ್ಯಕ್ಕೆ ಭಾರೀ ಆದಾಯ, ಆದಾಯ ಗುರಿ 45,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ..!

'ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಇಂಧನ ಬೆಲೆ ಬೆಲೆ ಏರಿಕೆ ಭೀತಿ, ಪೆಟ್ರೋಲ್ ಬಂಕ್‌'ಗಳಿಗೆ ಮುಗಿಬಿದ್ದ ಜನ..!

ಸಿಎಂ ಕುರ್ಚಿ ಕದನ ಮಧ್ಯೆ ಡಿಕೆಶಿಯಿಂದ ಮಾ.10ಕ್ಕೆ ಡಿನ್ನರ್ ಪಾರ್ಟಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸುತ್ತಾರಾ ಡಿಸಿಎಂ?

CM-ಪ್ರಧಾನಿ ಹುದ್ದೆಗೇರಿದವರು ಯಾವ ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗಿದ್ದಾರೆ: JDSಗೆ ಡಿಕೆಶಿ ಸವಾಲು

SCROLL FOR NEXT