ಪ್ರಿಯಾಂಕಾ ಗಾಂಧಿ 
ದೇಶ

'ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ಗೊತ್ತಿಲ್ಲ': ನಿರ್ಮಲಾ ಸೀತಾರಾಮನ್ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ದೇಶದಲ್ಲಿ ನಿರುದ್ಯೋಗ ಅಥವಾ ಬೆಲೆ ಏರಿಕೆ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಕ್ಕಾಗಿ ಅವರು "ಬೇರೆ ಗ್ರಹದಲ್ಲಿ ವಾಸಿಸುತ್ತಿದ್ದಾರೆ" ಎಂದು ಹೇಳಿದರು.

ದೆಹಲಿ: ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ಗೊತ್ತಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ಸಂಸತ್ತಿನಲ್ಲಿ ಬಜೆಟ್​ ಮೇಲಿನ ಸಾಮಾನ್ಯ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರ ಉತ್ತರಕ್ಕೆ ಪ್ರತಿಕ್ರಿಯಿಸುತ್ತಾ ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಾ ಸೀತಾರಾಮನ್, ಅಮೆರಿಕನ್ ಡಾಲರ್ ವಿರುದ್ಧ ಭಾರತೀಯ ರೂಪಾಯಿ ಕುಸಿತದ ಹಿಂದೆ ಹಲವು ದೇಶೀಯ ಮತ್ತು ಜಾಗತಿಕ ಕಾರಣಗಳಿವೆ ಎಂದು ಹೇಳಿದಾಗ ಪ್ರಿಯಾಂಕಾ ಈ ಹೇಳಿಕೆ ನೀಡಿದ್ದಾರೆ.

ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದ ಅವಧಿಯಲ್ಲಿ, ಹಣದುಬ್ಬರವು ಎರಡಂಕಿಗಳಲ್ಲಿತ್ತು, ಶೇಕಡಾ 10 ಕ್ಕಿಂತ ಹೆಚ್ಚಿತ್ತು, ಆದರೆ ಪ್ರಸ್ತುತ ಅಂತಹ ಪರಿಸ್ಥಿತಿ ಇಲ್ಲ ಎಂದು ಅವರು ಹೇಳಿದರು. ದೇಶದಲ್ಲಿ ನಿರುದ್ಯೋಗ ಅಥವಾ ಬೆಲೆ ಏರಿಕೆ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಕ್ಕಾಗಿ ಅವರು "ಬೇರೆ ಗ್ರಹದಲ್ಲಿ ವಾಸಿಸುತ್ತಿದ್ದಾರೆ" ಎಂದು ಹೇಳಿದರು.

ರಾಜ್ಯಸಭೆಯಲ್ಲಿ ಮಾತನಾಡಿದ ಅವರು, "2047 ರ ವೇಳೆಗೆ ಭಾರತವನ್ನು 'ವಿಕಸಿತ ಭಾರತ'ವಾಗಿ ಪರಿವರ್ತಿಸುವ ಭವಿಷ್ಯದ ಮಾರ್ಗ"ವನ್ನು ರೂಪಿಸುವುದು ಬಜೆಟ್‌ನ ಪ್ರಮುಖ ಗುರಿಯಾಗಿದೆ ಎಂದು ಒತ್ತಿ ಹೇಳಿದರು.

ಬಡವರು, ಯುವಜನರು, ಅನ್ನದಾತ ಮತ್ತು ಮಹಿಳೆಯರ" ಮೇಲೆ ಕೇಂದ್ರೀಕರಿಸಿ, ಬಜೆಟ್ ಕೃಷಿ, ಎಂಎಸ್‌ಎಂಇಗಳು, ಹೂಡಿಕೆಗಳು, ರಫ್ತುಗಳು, ಗ್ರಾಮೀಣಾಭಿವೃದ್ಧಿ, ಉದ್ಯೋಗವನ್ನು ಸಕ್ರಿಯಗೊಳಿಸುವುದು, ದೇಶೀಯ ಬಳಕೆಯನ್ನು ಉತ್ತೇಜಿಸುವುದು ಮತ್ತು ಇನ್ನೂ ಹೆಚ್ಚಿನ ಕ್ಷೇತ್ರಗಳಲ್ಲಿ ಹೊಸ ಯೋಜನೆಗಳು ಮತ್ತು ಸುಧಾರಣೆಗಳನ್ನು ಅನಾವರಣಗೊಳಿಸುತ್ತದೆ.

ಕೇಂದ್ರ ಬಜೆಟ್ ರಾಷ್ಟ್ರದ ಅಭಿವೃದ್ಧಿ ಆದ್ಯತೆಗಳು ಮತ್ತು ಹಣಕಾಸಿನ ಅಗತ್ಯಗಳನ್ನು ಚತುರತೆಯಿಂದ ಸಮತೋಲನಗೊಳಿಸಲು ಪ್ರಯತ್ನಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅನುಷ್ಠಾನದ ನಂತರದ ವರ್ಷಗಳಲ್ಲಿ ಪರೋಕ್ಷ ತೆರಿಗೆ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ಎಫ್‌ಎಂ ಸೀತಾರಾಮನ್ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT