ಮದುವೆ ಮನೆಗೆ ನುಗ್ಗಿದ್ದ ಚಿರತೆ 
ದೇಶ

ಮದುವೆ ಸಂಭ್ರಮದಲ್ಲಿದ್ದವರಿಗೆ ಚಿರತೆ ಶಾಕ್; ಪ್ರಾಣ ಉಳಿಸಿಕೊಳ್ಳಲು ವಧು-ವರ ಕಾರಿನಲ್ಲೇ ಲಾಕ್!

ನಗರದ ಬುದ್ಧೇಶ್ವರ ರಸ್ತೆ ಪ್ರದೇಶದಲ್ಲಿ ಬುಧವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಚಿರತೆ ಬ್ಯಾಂಕ್ವೆಟ್ ಹಾಲ್‌ಗೆ ಪ್ರವೇಶಿಸಿದ ಕೂಡಲೇ ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದರು.

ಲಖನೌ: ಇಲ್ಲಿ ನಡೆಯುತ್ತಿದ್ದ ಮದುವೆಯೊಂದಕ್ಕೆ ಚಿರತೆಯೊಂದು ನುಗ್ಗಿದ್ದು, ತೀವ್ರ ಆತಂಕಕ್ಕೆ ಕಾರಣವಾಯಿತು. ಘಟನೆಯಲ್ಲಿ ಅರಣ್ಯಾಧಿಕಾರಿಯೊಬ್ಬರು ಗಾಯಗೊಂಡಿದ್ದು, ಜೀವ ಉಳಿಸಿಕೊಳ್ಳಲು ಓಡಿದ ವಧು-ವರರು ಕಾರಿನಲ್ಲಿ ಸಿಲುಕಿಕೊಳ್ಳುವಂತಾಯಿತು.

ನಗರದ ಬುದ್ಧೇಶ್ವರ ರಸ್ತೆ ಪ್ರದೇಶದಲ್ಲಿ ಬುಧವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಚಿರತೆ ಬ್ಯಾಂಕ್ವೆಟ್ ಹಾಲ್‌ಗೆ ಪ್ರವೇಶಿಸಿದ ಕೂಡಲೇ ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಧಿಕ್ಕಾಪಾಲಾಗಿ ಓಡಿದರು. ಸ್ಥಳದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಚಿರತೆ ನುಗ್ಗುತ್ತಿದ್ದಂತೆ ಮಂಟಪದಲ್ಲಿ ಕುಳಿತಿದ್ದ ವಧು-ವರರೂ ಕೂಡ ಓಡಿ ಹೋಗಿ ಕಾರಿನಲ್ಲಿ ಲಾಕ್ ಮಾಡಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ತಕ್ಷಣ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಹಲವು ಗಂಟೆಗಳ ಪ್ರಯತ್ನದ ನಂತರ ತಡರಾತ್ರಿ 2 ಗಂಟೆ ಸುಮಾರಿಗೆ ಚಿರತೆಯನ್ನು ಸೆರೆಹಿಡಿಯಲಾಗಿದೆ.

ಪೊಲೀಸರ ಪ್ರಕಾರ, ಚಿರತೆ ಹಿಡಿಯುವ ವೇಳೆ ಅರಣ್ಯ ಇಲಾಖೆ ಅಧಿಕಾರಿ ಮುಕದ್ದರ್ ಅಲಿ ಅವರ ಕೈಗೆ ಗಾಯಗಳಾಗಿವೆ. ಚಿರತೆ ಹಿಡಿಯುವವರೆಗೂ, ವಧು ಮತ್ತು ವರರ ಕುಟುಂಬದವರು ಸುರಕ್ಷತೆಗಾಗಿ ತಮ್ಮ ವಾಹನಗಳಲ್ಲಿ ಕುಳಿತಿದ್ದರು ಎಂದು ಅತಿಥಿಯೊಬ್ಬರು ಹೇಳಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈಮಧ್ಯೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಘಟನೆಯ ಬಗ್ಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಘಟನೆಯು ರಾಜ್ಯ ಸರ್ಕಾರದ "ಭ್ರಷ್ಟಾಚಾರ"ದ ಪರಿಣಾಮವಾಗಿದೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಉತ್ತರ ಪ್ರದೇಶದ 'ಜುಮ್ಲಾಜೀವಿ' ಬಿಜೆಪಿ ಸರ್ಕಾರವು ಬೀದಿ ನಾಯಿಗಳ ಸಮಸ್ಯೆಗೆ ಇನ್ನೂ ಪರಿಹಾರ ಕಂಡುಕೊಂಡಿಲ್ಲ ಮತ್ತು ಇದೀಗ ರಾಜ್ಯ ರಾಜಧಾನಿಯಲ್ಲಿ 'ಚಿರತೆ' ಬಂದಿರುವುದು ವರದಿಯಾಗಿದೆ. ಲಖನೌನಲ್ಲಿ ಮದುವೆಗೆ ಚಿರತೆಯೊಂದು ನುಗ್ಗಿದ ಸುದ್ದಿ ಆತಂಕಕಾರಿಯಾಗಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ಕಾಡಿನಲ್ಲಿ ಮಾನವನ ಅತಿಕ್ರಮಣ ಹೆಚ್ಚುತ್ತಿದೆ. ಹೀಗಾಗಿ, ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿಗೆ ಬರುತ್ತಿವೆ. ಇದರಿಂದ ಸಾಮಾನ್ಯ ಜನರ ಜೀವಕ್ಕೆ ಅಪಾಯ ಎದುರಾಗುತ್ತಿದೆ' ಎಂದಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆಯೋ ಅಥವಾ ಇದು ಚಿರತೆ ಅಲ್ಲ, ದೊಡ್ಡ ಗಾತ್ರದ ಬೆಕ್ಕು ಎಂದು ಹೇಳಿ ಘಟನೆಯನ್ನು ಮುಚ್ಚಿಹಾಕುತ್ತದೆಯೋ ನೋಡಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT