ಅಮೆರಿಕಾದಲ್ಲಿ ಪ್ರಧಾನಿ ಮೋದಿ. 
ದೇಶ

ಅಮೆರಿಕಾದಲ್ಲಿ ಪ್ರಧಾನಿ ಮೋದಿ: ಅನಿವಾಸಿ ಭಾರತೀಯರಿಂದ ಅದ್ಧೂರಿ ಸ್ವಾಗತ; US ಗುಪ್ತಚರ ವಿಭಾಗದ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ಭೇಟಿ

ಅಮೆರಿಕಕ್ಕೆ ಬಂದಿಳಿದ ಬಳಿಕ ಮೋದಿ ಬ್ಲೇರ್ ಹೌಸ್‌ಗೆ ಭೇಟಿ ನೀಡಿದ್ದರು. ಇದೇ ವೇಳೆ ಭಾರತೀಯ ಸಮುದಾಯದವರು ಮೋದಿ ಅವರನ್ನು ಸ್ವಾಗತಿಸಿದ್ದರು. ಭಾರತ್ ಮಾತಾ ಕಿ ಜೈ, ಮೋದಿ.. ಮೋದಿ.. ಎಂದು ಘೋಷಣೆ ಕೂಗಿದರು.

ವಾಷಿಂಗ್ಟನ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ 2 ದಿನಗಳ ಯುಎಸ್ ಪ್ರವಾಸವನ್ನು ಬುಧವಾರ ಪ್ರಾರಂಭಿಸಿದ್ದು, ಜಾಯಿಂಟ್ ಆಂಡ್ರ್ಯೂಸ್ ಬೇಸ್‌ಗೆ ಬಂದಿಳಿದ ಅವರಿಗೆ ಅನಿವಾಸಿ ಭಾರತೀಯರು ಆತ್ಮೀಯ ಸ್ವಾಗತವನ್ನು ಕೋರಿದರು.

ಅಮೆರಿಕಕ್ಕೆ ಬಂದಿಳಿದ ಬಳಿಕ ಮೋದಿ ಬ್ಲೇರ್ ಹೌಸ್‌ಗೆ ಭೇಟಿ ನೀಡಿದ್ದರು. ಇದೇ ವೇಳೆ ಭಾರತೀಯ ಸಮುದಾಯದವರು ಮೋದಿ ಅವರನ್ನು ಸ್ವಾಗತಿಸಿದ್ದರು. ‘ಭಾರತ್ ಮಾತಾ ಕಿ ಜೈ’, ‘ಮೋದಿ.. ಮೋದಿ..’ ಎಂದು ಘೋಷಣೆ ಕೂಗಿದರು.

ಶೀತ ಗಾಳಿ ಮತ್ತು ಮಳೆಯ ನಡುವೆವಲ್ಲೂ ಸಾಕಷ್ಟು ಮಂದಿ ಅನಿವಾಸಿ ಭಾರತೀಯರ ಪ್ರಧಾನಿ ಮೋದಿ ಅವರನ್ನು ಕಾಣಲು ಆಗಮಿಸಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಚಳಿಗಾಲದ ಚಳಿಯಲ್ಲಿ ಬೆಚ್ಚಗಿನ ಸ್ವಾಗತ. ಶೀತ ಹವಾಮಾನದ ಹೊರತಾಗಿಯೂ, ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ಸಮುದಾಯದವರು ನನ್ನನ್ನು ವಿಶೇಷ ಸ್ವಾಗತದೊಂದಿಗೆ ಸ್ವಾಗತಿಸಿದ್ದಾರೆ. ಅವರಿಗೆ ನನ್ನ ಕೃತಜ್ಞತೆಗಳು ಎಂದು ಹೇಳಿದ್ದಾರೆ.

ಈ ನಡುವೆ ಭಾರತದ ಪ್ರಧಾನಿಯವರ ಅಮೆರಿಕ ಭೇಟಿಯನ್ನು ಗುರುತಿಸಲು ಬ್ಲೇರ್ ಹೌಸ್‌ನಲ್ಲಿ ಭಾರತದ ತ್ರಿವರ್ಣ ಧ್ವಜಗಳನ್ನು ಹಾಕಲಾಗಿದ್ದು, ಮೋದಿಯವರು ಬ್ಲೇರ್ ಹೌಸ್‌ನಲ್ಲಿ ತಂಗಿದ್ದಾರೆ, ಬ್ಲೇರ್ ಹೌಸ್ ಅಮೆರಿಕಾ ಅಧ್ಯಕ್ಷರ ಅಧಿಕೃತ ಅತಿಥಿಗೃಹವಾಗಿದೆ.

ಅಮೆರಿಕಾಗೆ ಭೇಟಿ ನೀಡಿರು ಮೋದಿಯವರು, ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿ (ಡಿಎನ್‌ಐ) ತುಳಸಿ ಗಬ್ಬಾರ್ಡ್ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಭಾರತ–ಅಮೆರಿಕ ನಡುವಿನ ಬಾಂಧವ್ಯದ ಬಗ್ಗೆ ಚರ್ಚೆ ನಡೆಸಿದ್ದಾರೆ.

ಪ್ರಧಾನಿ ಮೋದಿ ಮತ್ತು ಗಬ್ಬಾರ್ಡ್ ಪರಸ್ಪರ ಹಸ್ತಲಾಘವ ನೀಡುವ ಮೂಲಕ ಆತ್ಮೀಯವಾಗಿ ಶುಭಾಶಯ ಕೋರಿದ್ದಾರೆ. ಮಂಗಳವಾರ ಶ್ವೇತಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಗಬ್ಬಾರ್ಡ್ ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇದಾದ ಕೆಲವೇ ಗಂಟೆಗಳ ನಂತರ ಮೋದಿ ಅವರೊಂದಿಗೆ ಸಭೆ ನಡೆಸಿದ್ದಾರೆ.

ಭೇಟಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿ ತುಲಸಿ ಗಬ್ಬಾರ್ಡ್ ಅವರನ್ನು ವಾಷಿಂಗ್ಟನ್ ಡಿಸಿಯಲ್ಲಿ ಭೇಟಿಯಾಗಿದ್ದು, ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ. ಭಾರತ-ಅಮೆರಿಕ ನಡುವಿನ ಬಾಂಧವ್ಯದ ಬಗ್ಗೆ ಚರ್ಚೆ ನಡೆಸಿದ್ದೇವೆ’ ಎಂದು ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಎರಡು ದಿನಗಳ ಭೇಟಿಗಾಗಿ ಅಮೆರಿಕಕ್ಕೆ ಬಂದಿಳಿದಿದ್ದಾರೆ.

ಅಮೆರಿಕದಲ್ಲಿರುವ ಭಾರತದ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ಸೇರಿದಂತೆ ಇತರ ಅಧಿಕಾರಿಗಳು ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದರು. ಡೊನಾಲ್ಡ್ ಟ್ರಂಪ್ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ಮೋದಿ ಅವರ ಮೊದಲ ಅಮೆರಿಕ ಭೇಟಿ ಇದಾಗಿದೆ.

ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಭೇಟಿಯು ಭಾರತ ಹಾಗೂ ಅಮೆರಿಕ ನಡುವಣ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT