ಅಜಂ ಖಾನ್ 
ದೇಶ

ಯಂತ್ರ ಕಳ್ಳತನ ಪ್ರಕರಣ: ಅಜಂ ಖಾನ್, ಪುತ್ರನಿಗೆ ಸುಪ್ರೀಂ ಕೋರ್ಟ್ ಜಾಮೀನು

ಅಲಹಾಬಾದ್ ಹೈಕೋರ್ಟ್ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಅಜಂ ಖಾನ್ ಮತ್ತು ಪುತ್ರ ಅಬ್ದುಲ್ಲಾ ಅಜಮ್ ಖಾನ್ ಮೇಲ್ಮನವಿ ಸಲ್ಲಿಸಿದ್ದರು.

ನವದೆಹಲಿ: ಯಂತ್ರ ಕಳ್ಳತನ ಪ್ರಕರಣದಲ್ಲಿ ಉತ್ತರ ಪ್ರದೇಶ ಮಾಜಿ ಸಚಿವ ಅಜಮ್ ಖಾನ್ ಮತ್ತು ಅವರ ಪುತ್ರ ಅಬ್ದುಲ್ಲಾ ಅಜಮ್ ಖಾನ್ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ಅಲಹಾಬಾದ್ ಹೈಕೋರ್ಟ್ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಅಜಂ ಖಾನ್ ಮತ್ತು ಪುತ್ರ ಅಬ್ದುಲ್ಲಾ ಅಜಮ್ ಖಾನ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರ ಪೀಠವು, ಜಾಮೀನು ನೀಡಿ ಆದೇಶಿಸಿದೆ.

"ಪ್ರಕರಣದಲ್ಲಿ ಮೇಲ್ಮನವಿದಾರರು ಅನುಭವಿಸಿದ ಜೈಲು ಶಿಕ್ಷೆಯ ಅವಧಿ ಮತ್ತು ಆರೋಪಪಟ್ಟಿಯನ್ನು ಈಗಾಗಲೇ ಸಲ್ಲಿಸಲಾಗಿದೆ ಎಂಬ ಸಂಗತಿಗಳು ಮತ್ತು ಸಂದರ್ಭಗಳನ್ನು ಪರಿಗಣಿಸಿ, ನಾವು ಹೈಕೋರ್ಟ್ ನ ಆಕ್ಷೇಪಾರ್ಹ ಆದೇಶವನ್ನು ರದ್ದುಗೊಳಿಸಿ ಆರೋಪಿಗಳಿಗೆ ಜಾಮೀನು ನೀಡಲು ಒಲವು ತೋರುತ್ತೇವೆ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.

"ಅದರ ಪ್ರಕಾರ, ಆಕ್ಷೇಪಾರ್ಹ ಆದೇಶವನ್ನು ರದ್ದುಗೊಳಿಸಲಾಗಿದೆ ಮತ್ತು ಮೇಲ್ಮನವಿದಾರರಿಗೆ ಜಾಮೀನು ನೀಡಲಾಗಿದೆ" ಎಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ.

ಮೇಲ್ಮನವಿದಾರರು ಪ್ರಕರಣದ ವಿಚಾರಣೆ ಮುಕ್ತಾಯದವರೆಗೆ ವಿಚಾರಣೆಗೆ ಸಹಕರಿಸಬೇಕು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಅಥವಾ ಗೆಲ್ಲಲು ಯಾವುದೇ ಪ್ರಯತ್ನ ಮಾಡಬಾರದು ಎಂಬ ಷರತ್ತನ್ನು ವಿಧಿಸಲು ಸುಪ್ರೀಂ ಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ಅಜಂ ಖಾನ್ ಮತ್ತು ಅವರ ಮಗ ಸೆಪ್ಟೆಂಬರ್ 21 ರ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾಂಪುರ ಜಿಲ್ಲೆಯ ನಗರ ಪಾಲಿಕೆ ಪರಿಷತ್ ಖರೀದಿಸಿದ ರಸ್ತೆ ಸ್ವಚ್ಛಗೊಳಿಸುವ ಯಂತ್ರವನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಅಜಂ ಖಾನ್, ಅವರ ಮಗ ಹಾಗೂ ಇತರ ಐವರ ವಿರುದ್ಧ 2022 ರಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel