ರಾಜ್ಯಸಭೆ 
ದೇಶ

ವಕ್ಫ್ ಮಸೂದೆ ಕುರಿತ JPC ವರದಿ ರಾಜ್ಯಸಭೆಯಲ್ಲಿ ಮಂಡನೆ; ಪ್ರತಿಪಕ್ಷಗಳಿಂದ ಸಭಾತ್ಯಾಗ

ಜೆಪಿಸಿ ಸದಸ್ಯರಾದ ಬಿಜೆಪಿ ಸಂಸದೆ ಮೇಧಾ ವಿಶ್ರಮ್ ಕುಲಕರ್ಣಿ ಅವರು ಇಂದು ವರದಿಯನ್ನು ಮಂಡಿಸಿದರು. ವರದಿಯನ್ನು ಮಂಡಿಸಿದ ನಂತರ ವಿರೋಧ ಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದರು.

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ ಕುರಿತಾದ ಜಂಟಿ ಸಂಸತ್ ಸಮಿತಿ(JPC)ಯ ವರದಿಯನ್ನು ರಾಜ್ಯಸಭೆಯಲ್ಲಿ ಗುರುವಾರ ಮಂಡಿಸಲಾಯಿತು.

ಜೆಪಿಸಿ ವರದಿ ಮಂಡಿಸುತ್ತಿದ್ದಂತೆ ವಿರೋಧ ಪಕ್ಷಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಕೋಲಾಹಲ ಸೃಷ್ಟಿಸಿದವು ಮತ್ತು ಸಭಾತ್ಯಾಗ ಮಾಡಿ ಸದನದಿಂದ ಹೊರ ನಡೆದರು.

ಜೆಪಿಸಿ ಸದಸ್ಯರಾದ ಬಿಜೆಪಿ ಸಂಸದೆ ಮೇಧಾ ವಿಶ್ರಮ್ ಕುಲಕರ್ಣಿ ಅವರು ಇಂದು ವರದಿಯನ್ನು ಮಂಡಿಸಿದರು. ವರದಿಯನ್ನು ಮಂಡಿಸಿದ ನಂತರ ವಿರೋಧ ಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷ ಜಗದೀಪ್ ಧಂಖರ್ ಅವರು, "ಭಾರತದ ರಾಷ್ಟ್ರಪತಿಗಳಿಗೆ ಅಗೌರವ ತೋರಿಸಬೇಡಿ..." ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷದ ಸದಸ್ಯರಿಗೆ ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳುವಂತೆ ಹೇಳಬೇಕು ಎಂದು ಒತ್ತಾಯಿಸಿದರು.

ಆದಾಗ್ಯೂ, ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಲೇ ಇದ್ದರು. ಹೀಗಾಗಿ ಧಂಖರ್ ಅವರು ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..'; ‘ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’ ಎಂದ ಎಂಬಿ ಪಾಟೀಲ್ ಸ್ಪಷ್ಟನೆ, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!