ಕುಂಭಮೇಳ online desk
ದೇಶ

ಕುಂಭಮೇಳದ ಬಗ್ಗೆ ತಪ್ಪು ಮಾಹಿತಿ: 53 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕ್ರಮ

ಹಳೆಯ ವಿಡಿಯೋಗಳು ಸೇರಿದಂತೆ ಅನೇಕ ದಾರಿತಪ್ಪಿಸುವ ಪೋಸ್ಟ್‌ಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಮಹಾ ಕುಂಭ ಮೇಳದ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಕಳೆದ ಒಂದು ತಿಂಗಳಲ್ಲಿ ಉತ್ತರ ಪ್ರದೇಶ ಪೊಲೀಸರು 53 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

ನಕಲಿ ಸುದ್ದಿಗಳನ್ನು ನಿಗ್ರಹಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಹಳೆಯ ವೀಡಿಯೊಗಳು ಸೇರಿದಂತೆ ಅನೇಕ ದಾರಿತಪ್ಪಿಸುವ ಪೋಸ್ಟ್‌ಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡಿದ ಪೋಸ್ಟ್‌ಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಕ್ರಮ ಕೈಗೊಳ್ಳಲು ಉತ್ತರ ಪ್ರದೇಶ ಪೊಲೀಸರು ಮತ್ತು ತಜ್ಞ ಸಂಸ್ಥೆಗಳು ನಿರಂತರ ಸೈಬರ್ ಗಸ್ತು ನಡೆಸುವುದನ್ನು ಒಳಗೊಂಡ ಸಮಗ್ರ ಕಾರ್ಯತಂತ್ರವನ್ನು ಇಲಾಖೆ ರೂಪಿಸಿದೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಶಾಂತ್ ಕುಮಾರ್ ಅವರು ಹೇಳಿದ್ದಾರೆ.

ಫೆಬ್ರವರಿ 13 ರಂದು, ಸೈಬರ್ ಮೇಲ್ವಿಚಾರಣೆಯಲ್ಲಿ ಮಹಾ ಕುಂಭ ಮೇಳಕ್ಕೆ ತಪ್ಪಾಗಿ ಲಿಂಕ್ ಮಾಡಲಾದ ಎರಡು ದಾರಿತಪ್ಪಿಸುವ ವಿಡಿಯೋಗಳು ಪತ್ತೆಯಾಗಿವೆ. ಈಜಿಪ್ಟ್‌ನಲ್ಲಿ ನಡೆದ ಬೆಂಕಿ ಅವಘಡದ ವಿಡಿಯೋವನ್ನು ಮಹಾ ಕುಂಭ ಬಸ್ ನಿಲ್ದಾಣದಲ್ಲಿ ಬೆಂಕಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದ್ದು, 40-50 ವಾಹನಗಳು ನಾಶವಾಗಿವೆ ಎಂದು ಹೇಳಲಾಗಿದೆ.

ತನಿಖೆಯ ನಂತರ ಈ ದೃಶ್ಯಗಳು ವಾಸ್ತವವಾಗಿ ಕೈರೋದಲ್ಲಿ ಜುಲೈ 14, 2020 ರಂದು ಸಂಭವಿಸಿದ ಅಗ್ನಿ ಅವಘಡದ ದೃಶ್ಯಗಳಾಗಿದ್ದವು ಎಂದು ಅವರು ತಿಳಿಸಿದ್ದಾರೆ.

ಪ್ರಯಾಗರಾಜ್ ಕುಂಭಮೇಳ ಆಡಳಿತ ಮತ್ತು ಉತ್ತರ ಪ್ರದೇಶ ಪೊಲೀಸರು ತಪ್ಪು ಮಾಹಿತಿಯನ್ನು ಹರಡಲು ಕಾರಣರಾದ ಹಲವು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT