ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಅಣ್ಣನಿಂದಲೇ ನೀಚ ಕೃತ್ಯ: ಅಪ್ರಾಪ್ತ ಸಹೋದರಿಯ ಮೇಲೆ ನಿರಂತರ ಅತ್ಯಾಚಾರ; ಗರ್ಭಪಾತಕ್ಕೆ ಒತ್ತಾಯ

ಕಳೆದ ವರ್ಷ ಅಕ್ಟೋಬರ್ ಮತ್ತು ಡಿಸೆಂಬರ್ ನಡುವೆ ತನ್ನ ಸಹೋದರ ಮತ್ತು ಚಿಕ್ಕಪ್ಪ ಹಲವಾರು ಬಾರಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಸಂಗ್ರಹ ಚಿತ್ರ
Vishwanath S
Updated On : 14 Feb 2025, 6:56 pm

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಅಪ್ರಾಪ್ತೆಯ ಮೇಲೆ ಆಕೆಯ ಸಹೋದರ ಮತ್ತು ಚಿಕ್ಕಪ್ಪ ನಿರಂತರವಾಗಿ ಅತ್ಯಾಚಾರ ಎಸಗಿದಲ್ಲದೆ ಗರ್ಭಪಾತಕ್ಕೆ ಒತ್ತಾಯಿಸಿರುವ ಘಟನೆ ನಡೆದಿದೆ. 16 ವರ್ಷದ ಬಾಲಕಿಯ ದೂರಿನ ಮೇರೆಗೆ ಮೀರಾ-ಭಾಯಂದರ್, ವಸೈ-ವಿರಾರ್ ಪೊಲೀಸರು ಆಕೆಯ 18 ವರ್ಷದ ಸಹೋದರ ಮತ್ತು ಚಿಕ್ಕಪ್ಪನನ್ನು ಬಂಧಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ ಮತ್ತು ಡಿಸೆಂಬರ್ ನಡುವೆ ತನ್ನ ಸಹೋದರ ಮತ್ತು ಚಿಕ್ಕಪ್ಪ ಹಲವಾರು ಬಾರಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಇದೀಗ ನಾನು ಗರ್ಭಿಣಿಯಾಗಿದ್ದು ನನ್ನ ಚಿಕ್ಕಪ್ಪ ಗರ್ಭಪಾತಕ್ಕಾಗಿ ಮುಂಬೈನ ಗ್ರಾಂಟ್ ರಸ್ತೆಯಲ್ಲಿರುವ ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ದಿದ್ದರು ಎಂದು ಸಂತ್ರಸ್ತೆ ದೂರಿದ್ದಾಳೆ.

ಆರೋಪಿಗಳ ವಿರುದ್ಧ ಅತ್ಯಾಚಾರ, ಮಹಿಳೆಯ ಒಪ್ಪಿಗೆಯಿಲ್ಲದೆ ಗರ್ಭಪಾತಕ್ಕೆ ಒತ್ತಾಯ ಮತ್ತು ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಕ್ರಿಮಿನಲ್ ಬೆದರಿಕೆ ಆರೋಪಗಳನ್ನು ಹೊರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Advertisement

Advertisement

Also Read

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: ತಮ್ಮ ವಿರುದ್ಧದ ಎಫ್ಐಆರ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಣವೀರ್ ಅಲ್ಹಾಬಾದಿಯಾ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement